Breaking News
Home / Uncategorized / ಬಸವಕಲ್ಯಾಣ ಉಪ ಚುನಾವಣೆ: ಡಿಸಿಎಂ ಸವದಿಯತ್ತ ಬಿಜೆಪಿ ಒಲವು, ಕೈ ನಿಂದ ಧರ್ಮಸಿಂಗ್‌ ಪುತ್ರ?

ಬಸವಕಲ್ಯಾಣ ಉಪ ಚುನಾವಣೆ: ಡಿಸಿಎಂ ಸವದಿಯತ್ತ ಬಿಜೆಪಿ ಒಲವು, ಕೈ ನಿಂದ ಧರ್ಮಸಿಂಗ್‌ ಪುತ್ರ?

Spread the love

ಬೆಂಗಳೂರು: ಬಸವಕಲ್ಯಾಣ ವಿಧಾನಸಭೆ ಉಪ ಚುನಾವಣೆಗೆ ಡಿಸಿಎಂ ಲಕ್ಷ್ಮಣ ಸವದಿ ಹೆಸರು ಕೇಳಿ ಬರುತ್ತಿದೆ. ಬಸವಕಲ್ಯಾಣ ವಿಧಾನಸಭೆ ಉಪ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಜೆಪಿ ಹೇಗಾದರೂ ಮಾಡಿ ಗೆಲುವು ಸಾಧಿಸಲು ಸೂಕ್ತ ಅಭ್ಯರ್ಥಿಯ ಹುಡುಕಾಟದಲ್ಲಿದ್ದು, ಈಗ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೆಸರು ಮುನ್ನೆಲೆಗೆ ಬಂದಿದೆ.

ಲಕ್ಷ್ಮಣ ಸವದಿ ಗಡಿ ಭಾಗದಲ್ಲಿ ಮರಾಠ ಸಮುದಾಯದೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವುದರಿಂದ ಬಸವ ಕಲ್ಯಾಣ ಕ್ಷೇತ್ರದಲ್ಲಿ ಆ ಸಮುದಾಯದ ಮತಗಳನ್ನು ಸೆಳೆಯಬಹುದು ಎಂಬ ಲೆಕ್ಕಾಚಾರ ಇದೆ ಎಂಬ ಮಾಹಿತಿ ಲಭ್ಯವಾಗಿದೆ.

ಹಾಲಿ ವಿಧಾನ ಪರಿಷತ್‌ ಸದಸ್ಯರಾಗಿರುವ ಅವರನ್ನು ಪರಿಷತ್‌ ಸದಸ್ಯತ್ವಕ್ಕೆ ರಾಜೀನಾಮೆ ಕೊಡಿಸದೇ ಚುನಾವಣಾ ಕಣಕ್ಕಿಳಿಸಲು ಆಲೋಚನೆ ನಡೆದಿದೆ ಎಂದು ತಿಳಿದು ಬಂದಿದೆ.

ಕಾಂಗ್ರೆಸ್‌ನಿಂದ ಮಾಜಿ ಸಿಎಂ ಎನ್‌. ಧರ್ಮಸಿಂಗ್‌ ಅವರ ಪುತ್ರ ವಿಜಯ್‌ ಸಿಂಗ್‌ ಹೆಸರು ಕೇಳಿ ಬರುತ್ತಿರುವುದರಿಂದ ಪ್ರಬಲ ಪೈಪೋಟಿಯೊಡ್ಡಲು ಲಕ್ಷ್ಮಣ ಸವದಿ ಅವರನ್ನು ಕಣಕ್ಕಿಳಿಸುವ ಬಗ್ಗೆ ಪಕ್ಷದಲ್ಲಿ ಈ ಆಲೋಚನೆ ಹುಟ್ಟಿಕೊಂಡಿದೆ ಎಂದು ತಿಳಿದು ಬಂದಿದೆ.


Spread the love

About Laxminews 24x7

Check Also

ಖಾನಾಪುರ: ಲಂಚ ಪಡೆಯುವಾಗ ಸಿಕ್ಕಿಬಿದ್ದ ಎಂಜಿನಿಯರ್

Spread the love ಖಾನಾಪುರ: ಸ್ಥಳೀಯ ಪಂಚಾಯತ್ ರಾಜ್ ಎಂಜಿನಿಯರಿಂಗ್ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ದುರದುಂಡೇಶ್ವರ ಮಹಾದೇವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ