ಬೆಂಗಳೂರು,ಜ.25- ಎಫ್‍ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ಮಹತ್ವದ ಪ್ರಗತಿ ಸಾಸಿದ್ದು, ಸೋರಿಕೆಯ ಮೂಲವನ್ನು ಪತ್ತೆಹಚ್ಚಿರುವ ಸಿಸಿಬಿ ಪೊಲೀಸರು ಕರ್ನಾಟಕ ಲೋಕಸೇವಾ ಆಯೋಗದ ಇಬ್ಬರು ಸಿಬ್ಬಂದಿಗಳನ್ನು ಬಂಸಿದ್ದಾರೆ.
ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‍ಸಿ)ದಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿರುವ ರಮೇಶ್, ಪರೀಕ್ಷಾ ವಿಭಾಗದಲ್ಲಿ ಶೀಘ್ರ ಲಿಫಿಗಾರರಾಗಿರುವ ಸನಾಬೇಡಿ ಅವರನ್ನು ಬಂಸಲಾಗಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.
ಸನಾಬೇಡಿ ಪರೀಕ್ಷಾ ವಿಭಾಗದ ನಿಯಂತ್ರಕರಾಗಿದ್ದು, ಪ್ರಶ್ನೆ ಪತ್ರಿಕೆಯನ್ನು ಸೋರಿಕೆ ಮಾಡಿ ರಮೇಶ್‍ಗೆ ನೀಡಿದ್ದಾರೆ. ಈತ ಚಂದ್ರು ಸೇರಿದಂತೆ ಇತರ ಆರೋಪಿಗಳಿಗೆ ಹಂಚಿಕೆ ಮಾಡಿದ್ದಾನೆ. ಈ ಬಗ್ಗೆ ತನಿಖೆ ಮುಂದುವರೆಸಿರುವುದಾಗಿ ಸಿಸಿಬಿ ಪೊಲೀಸರು ತಿಳಿಸಿದ್ದಾರೆ.
ಕಳೆದ ಎರಡು ದಿನಗಳಿಂದ ಪ್ರಶ್ನೆ ಪತ್ರಿಕೆ ಸೋರಿಕೆಯ ಜಾಲದ ಬೆನ್ನು ಹತ್ತಿರುವ ಸಿಸಿಬಿ ಪೊಲೀಸರು ಈವರೆಗೂ 16 ಮಂದಿಯನ್ನು ಬಂಸಿದ್ದಾರೆ.
Laxmi News 24×7