Breaking News

11 ನೇ ರಾಷ್ಟೀಯ ಮತದಾರ ದಿನದ್ ಅಂಗವಾಗಿ ಬೆಳಗಾವಿ ಜಿಲ್ಲಾಡಳಿತದಿಂದ ಜಾಥಾ ಕಾರ್ಯಕ್ರಮ.

Spread the love

 

 ಬೆಳಗಾವಿ :ಜಿಲ್ಲಾಡಳಿತದಿಂದ 11 ನೇ ರಾಷ್ಟ್ರೀಯ ಮತದಾರರ ದಿನದ ಅಂಗವಾಗಿ ನಮ್ಮ ಮತದಾರರನ್ನು ಅಧಿಕಾರಯುಕ್ತ,ಜಾಗರೂಕ, ಸುರಕ್ಷಿತ,ಮತ್ತು ಮಾಹಿತಿಯುಕ್ತರನ್ನಾಗಿ ಮಾಡುವ ಸಂದೇಶವನ್ನು ಇಟ್ಟುಕೊಂಡು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಿಂದ ಜಿಲ್ಲಾ ಪಂಚಾಯತ್ ಕಚೇರಿ ವರೆಗೆ ಜಾಥಾ ನಡೆಯಿತು ನಂತರ ಜಿಲ್ಲಾ ಸಭಾಂಗಣದಲ್ಲಿ ಕಾರ್ಯಕ್ರಮ ಜರುಗಿತು.

ಬೆಳಗಾವಿ ಜಿಲ್ಲಾಡಳಿತದಿಂದ 11 ನೇ ರಾಷ್ಟ್ರೀಯ ಮತದಾರರ ದಿನದ ಅಂಗವಾಗಿ ನಮ್ಮ ಮತದಾರರನ್ನು ಅಧಿಕಾರಯುಕ್ತ,ಜಾಗರೂಕ, ಸುರಕ್ಷಿತ,ಮತ್ತು ಮಾಹಿತಿಯುಕ್ತರನ್ನಾಗಿ ಮಾಡುವ ಸಂದೇಶವನ್ನು ಇಟ್ಟುಕೊಂಡು ಬೆಳಗಾವಿ ಜಿಲ್ಲಾಧಿಕಾರಿ ಅವರು ಹಸಿರು ನಿಶಾನೆ ತೋರಿಸುವ ಮೂಲಕ 11 ನೇ ಮತದಾರರ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಬೆಳಗಾವಿ ಜಿಲ್ಲಾ ಪಂಚಾಯತಿಯಲ್ಲಿ ಜಿಲ್ಲಾಧಿಕಾರಿಗಳು ಕಾರ್ಯಕ್ರಮ ಉದ್ಘಾಟನೆ ಮಾಡಿದರು.

ಹಾಗೆಯೇ ಬೆಳಗಾವಿಯ ಹಲವಾರು ಶಾಲಾ ಕಾಲೇಜಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು ಈ ಸಂದರ್ಭದಲ್ಲಿ ಬೆಳಗಾವಿ ಮರಾಠ ಮಂಡಳ ಶಾಲೆಯ ವಿದ್ಯಾರ್ಥಿಗಳು, ಸರಕಾರಿ ಪಾಲಿಟೆಕ್ನಿಕ್, ಸರದಾರ ಪಿಯು ಕಾಲೇಜು, ಎನಸಿಸಿ ವಿದ್ಯಾರ್ಥಿಗಳು, ಇನ್ನು ಹಲವಾರು ವಿದ್ಯಾರ್ಥಿಗಳು ಸೇರಿಕೊಂಡು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಿಂದ ಚೆನ್ನಮ್ಮ ವೃತ್ತ ಮಾರ್ಗವಾಗಿ ಜಿಲ್ಲಾ ಪಂಚಾಯತ್ ಕಚೇರಿ ಕಡೆ ಜಾಥಾ ಸಂಚರಿಸಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ್, ಅಪರ ಜಿಲ್ಲಾಧಿಕಾರಿ ಅಶೋಕ್ ದುಡಗುಂಟಿ,ಮಹಾನಗರ ಪಾಲಿಕೆ ಆಯುಕ್ತರು ಜಗದೀಶ್ ಕೆ.ಎಚ್,ಪರಶುರಾಮ್ ದುಡಗುಂಟಿ ಸೇರಿದಂತೆ ಇನ್ನು ಹಲವಾರು ಅಧಿಕಾರಿಗಳು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಕೂಡಲಸಂಗಮ ಪೀಠದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರದ್ದು ಉಚ್ಚಾಟನೆಯೇ ಅಲ್ಲ, ಆ ಟ್ರಸ್ಟಿಗೂ ಕೂಡಲಸಂಗಮ ಪೀಠಕ್ಕೂ ಯಾವುದೇ ಸಂಬಂಧವಿಲ್ಲ

Spread the loveಚಿಕ್ಕೋಡಿ: “ಕೂಡಲಸಂಗಮ ಪೀಠದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರದ್ದು ಉಚ್ಚಾಟನೆಯೇ ಅಲ್ಲ, ಆ ಟ್ರಸ್ಟಿಗೂ ಕೂಡಲಸಂಗಮ ಪೀಠಕ್ಕೂ ಯಾವುದೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ