ಬೆಂಗಳೂರು; ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿವಾದಾತ್ಮಕ ಮೂರು ಕೃಷಿ ಕಾನೂನುಗಳನ್ನು ವಾಪಸ್ ಪಡೆಯಬೇಕು ಎಂದು ರೈತರು ರಾಜಧಾನಿ ದೆಹಲಿಯಲ್ಲಿ ಕಳೆದ ಎರಡು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ನಾಳೆ ನಡೆಯುವ ಗಣರಾಜ್ಯೋತ್ಸವ ದಿನದಂದು ದೇಶವ್ಯಾಪಿ ರೈತರು ಟ್ರ್ಯಾಕ್ಟರ್ ಪರೇಡ್ ನಡೆಸುವ ಮೂಲಕ ಕೇಂದ್ರ ಸರ್ಕಾರಕ್ಕೆ ತಕ್ಕ ಪ್ರತ್ಯುತ್ತರ ನೀಡಲು ಸಿದ್ದರಾಗಿದ್ದಾರೆ. ಇದೇ ವಿಷಯವಾಗಿ ಇಂದು ಟ್ವೀಟ್ ಮಾಡಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಸರ್ಕಾರ ತನ್ನ ಹಠಮಾರಿ ಧೋರಣೆ ಕೈಬಿಟ್ಟು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲೊರಟಿರುವ ಕೃಷಿ ಕಾಯ್ದೆಗಳನ್ನು ಪುನರ್ ಪರಿಶೀಲನೆ ನಡೆಸಬೇಕು ಎಂದು ಮನವಿ ಮಾಡಿದ್ದಾರೆ.
ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಮಗೊಳಿಸಲೊರಟಿರುವ ಕೃಷಿ ಕಾಯ್ದೆಗಳನ್ನು ಪುನರ್ ಪರಿಶೀಲನೆ ನಡೆಸಬೇಕು. ಕೇಂದ್ರ ಸರ್ಕಾರ ಹಠಮಾರಿ ಧೋರಣೆ ಕೈಬಿಟ್ಟು ರೈತರಿಗೆ ಕಾಯ್ದೆಗಳ ಬಗ್ಗೆ ಮನವರಿಕೆ ಮಾಡಿಕೊಡುವ ಜವಾಬ್ದಾರಿಯನ್ನು ತೋರಬೇಕು. ರೈತರ ಸಮಸ್ಯೆಗಳ ಪರಿಹಾರಕ್ಕೆ ನಡೆಯುವ ಹೋರಾಟಕ್ಕೆ ಜೆಡಿಎಸ್ ಸದಾ ಬೆಂಬಲ ನೀಡುತ್ತಿದೆ. ರೈತರ ಅಭ್ಯುದಯಕ್ಕಾಗಿ ದುಡಿದ ಮತ್ತು ದುಡಿಯುವ ಏಕೈಕ ಪಕ್ಷವೆಂದರೆ ಅದು ಜೆಡಿಎಸ್ ಎಂದು ಹೇಳಿದ್ದಾರೆ.