ನವದೆಹಲಿ: ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ನಡೆಸುತ್ತಿದ್ದ ಪ್ರತಿಭಟನೆ ದೆಹಲಿಯಲ್ಲಿ ಹಿಂಸಾಚಾರಕ್ಕೆ ತಿರುಗಿದ್ದು, ಪ್ರತಿಭಟನಾಕಾರರು ಕೆಂಪುಕೋಟೆ ಮೇಲೆ ಧ್ವಜವೇರಿಸಿದ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಿರಿಯ ಅಧಿಕಾರಿಗಳ ಸಭೆ ಕರೆದಿದ್ದಾರೆ.
ಪ್ರತಿಭಟನಾಕಾರರು ಕೆಂಪುಕೋಟೆಗೆ ನುಗ್ಗಿ ಕೆಂಪುಕೋಟೆಯ ಮೂರು ಕಡೆಗಳಲ್ಲಿ ಧ್ವಜಾರೋಹಣ ಮಾಡಿದ್ದು, ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ಮಾಡಿ ಸ್ಥಳದಿಂದ ಎಲ್ಲರನ್ನೂ ಚದುರಿಸಿದ್ದಾರೆ. ಈ ಘಟನೆ ಬೆನ್ನಲ್ಲೇ ಅಮಿತ್ ಶಾ ಹಿರಿಯ ಅಧಿಕಾರಿಗಳ ತುರ್ತು ಸಭೆ ನಡೆಸಿದ್ದಾರೆ.
 Laxmi News 24×7
Laxmi News 24×7
				 
		 
						
					 
						
					 
						
					