ಬೆಂಗಳೂರು: ರೈತರನ್ನು ಭಯೋತ್ಪಾದಕರು ಎಂದು ಹೇಳಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಮಾಜಿ ಸಂಸದ ಉಗ್ರಪ್ಪ ಹಾಗೂ ವಿಧಾನಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ಆರೋಪಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರು ಯಾವಾಗ ಭಯೋತ್ಪಾದಕರಾದರು. ಕೃಷಿ ಸಚಿವರಾಗಿ ಈ ರೀತಿಯ ಮಾತು ಆಡಬಹುದೇ ಎಂದು ಪ್ರಶ್ನಿಸಿದರು.
ಬಿ.ಸಿ.ಪಾಟೀಲ್ ರೈತರ ಕ್ಷಮೆಯಾಚಿಸಬೇಕು. ಸಂಪುಟದಿಂದ ಅವರನ್ನು ಕೈ ಬಿಡಬೇಕು. ರೈತ ಸಮುದಾಯಕ್ಕೆ ಅವರು ಅವಮಾನ ಮಾಡಿದ್ದಾರೆ ಎಂದು ದೂರಿದರು.
ರೈತರ ಹೆಸರಿಗೆ ಮಸಿ 
ದೆಹಲಿ ಕೆಂಪುಕೋಟೆಯಲ್ಲಿ ಪ್ರತ್ಯೇಕ ಧ್ವಜ ಹಾರಿಸಿದವರು ಮೂಲ ಬಿಜೆಪಿಗರು. ಸಾಮಾಜಿಕ ಜಾಲತಾಣದಲ್ಲಿ ಅದು ವೈರಲ್ ಆಗಿದೆ. ಆದರೂ ರೈತರ ಹೆಸರಿಗೆ ಮಸಿ ಬಳಿಯುವ ಪ್ರಯತ್ನ ನಡೆದಿದೆ ಎಂದು ಹೇಳಿದರು.
ಕೇಂದ್ರ ಸರ್ಕಾರ ಸರ್ವಾಧಿಕಾರಿ ಧೋರಣೆ ಬಿಡಬೇಕು. ಮೂರೂ ಕಾಯ್ದೆಗಳನ್ನು ವಾಪಸ್ ಪಡೆಯಬೇಕು. ಸುಪ್ರೀಂಕೋರ್ಟ್ ಕೂಡ ಎಚ್ಚರಿಕೆ ನೀಡಿದರೂ ಬೆಲೆ ನೀಡಿಲ್ಲ ಎಂದು ತಿಳಿಸಿದರು.
 Laxmi News 24×7
Laxmi News 24×7
				 
		 
						
					 
						
					