ರಾಬರ್ಟ್’ ಚಿತ್ರದ ಬಿಡುಗಡೆಗೆ ಮುಹೂರ್ತ ನಿಗಧಿಯಾಗಿದ್ದು, ಮಾ.11ರಂದು ಚಿತ್ರ ಅದ್ದೂರಿಯಾಗಿ ತೆರೆ ಕಾಣುತ್ತಿದೆ. ಇದರ ನಡುವೆಯೇ ಚಿತ್ರತಂಡ ಭರದಿಂದ ಪ್ರಮೋಶನ್ ಕೆಲಸಗಳಿಗೆ ಚಾಲನೆ ನೀಡಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲಿ ನಟ
ಚಾಲೆಂಜಿಂಗ್ ಸ್ಟಾರ್ ದರ್ಶನ್ “ರಾಬರ್ಟ್’ ಚಿತ್ರದ ಹೊಸ ಪೋಸ್ಟರ್‌ನ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
“ವಿಶ್ವಾದ್ಯಂತ ನೆಲೆಸಿರುವ ಎಲ್ಲ ಭಾರತೀಯರಿಗೆ ಗಣರಾಜ್ಯೋತ್ಸವದ ಶುಭಾಶಯಗಳು. ಮಾರ್ಚ್ 11ರಂದು ಚಿತ್ರಮಂದಿರಕ್ಕೆ ಬರಲು “ರಾಬರ್ಟ್’ ಸಿನಿಮಾ ಸಿದ್ಧವಾಗಿದೆ. ಕನ್ನಡ ಮತ್ತು ತೆಲುಗಿನಲ್ಲಿ ಬಿಡುಗಡೆ ಆಗಲಿದೆ. ಎಂದಿನಂತೆ ನಿಮ್ಮ ಬೆಂಬಲಕ್ಕೆ ಧನ್ಯವಾದಗಳು’ ಎಂದು ಬರೆದುಕೊಂಡಿರುವ ದರ್ಶನ್, ರಗಡ್ ಆಗಿರುವಂತಹ “ರಾಬರ್ಟ್’ನ ಕನ್ನಡ ಮತ್ತು ತೆಲುಗು ಪೋಸ್ಟರ್ ಹಂಚಿಕೊಂಡಿದ್ದಾರೆ.
 Laxmi News 24×7
Laxmi News 24×7
				 
		 
						
					