Breaking News

2, 3ನೇ ಹಂತದ ನಗರಗಳಲ್ಲಿ ಕೈಗಾರಿಕೆಗೆ ಒತ್ತು: ಜಗದೀಶ ಶೆಟ್ಟರ್

Spread the love

ದಾವಣಗೆರೆ: ‘ಬೆಂಗಳೂರು ಕೈಗಾರಿಕೆಗಳಿಂದ ತುಂಬಿ ಹೋಗಿದೆ. ಒಂದೇ ಕಡೆ ಎಲ್ಲ ಉದ್ಯಮಗಳು ಕೇಂದ್ರೀಕೃತಗೊಳ್ಳಬಾರದು. ಎಲ್ಲ ಜಿಲ್ಲೆಗಳೂ ಅಭಿವೃದ್ಧಿ ಹೊಂದುವಂತೆ ಆಗಬೇಕು ಎಂದು ನಿರ್ಧರಿಸಿದ್ದೇವೆ. ಅದಕ್ಕಾಗಿ ಎರಡು ಮತ್ತು ಮೂರನೇ ಹಂತದ ನಗರಗಳಲ್ಲಿ ಕೈಗಾರಿಕೆಗಳನ್ನು ಅಭಿವೃದ್ಧಿ ಮಾಡಲಾಗುವುದು’ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ಹೇಳಿದರು.

ಕೈಗಾರಿಕೋದ್ಯಮಿಗಳ ಜತೆ ಬುಧವಾರ ಸಭೆ ನಡೆಸಿದ ಅವರು, ‘ಬೆಂಗಳೂರು-ಮುಂಬೈ ಹೆದ್ದಾರಿಯನ್ನು ಕೈಗಾರಿಕಾ ಕಾರಿಡಾರ್‌ ಎಂದು ಗುರುತಿಸಲಾಗಿದೆ. ಈ ಹೆದ್ದಾರಿ ಹಾದುಹೋಗುವ ಎಲ್ಲ ಜಿಲ್ಲೆಗಳಲ್ಲಿ ಕೈಗಾರಿಕೆ ಅಭಿವೃದ್ಧಿಯಾಗುತ್ತಿದೆ. ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಭೂಮಿ, ನೀರು, ವಿದ್ಯುತ್‌ ಸಹಿತ ಮೂಲ ಸೌಲಭ್ಯಗಳನ್ನು ಒದಗಿಸುತ್ತೇವೆ. ಉದ್ಯಮ ಸ್ಥಾಪಿಸುವವರಿಗೆ ರಿಯಾಯಿತಿ ನೀಡುತ್ತೇವೆ. ಅವರಿಗೆ ಎಲ್ಲ ಪ್ರೋತ್ಸಾಹ ನೀಡುತ್ತೇವೆ’ ಎಂದರು.

‘ವಿಶೇಷ ಹೂಡಿಕೆ ವಲಯ (ಎಸ್‌ಐಆರ್‌) ಎಂದು ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳನ್ನು ಗುರುತಿಸಿ ಆದ್ಯತೆ ನೀಡುವ ಯೋಜನೆ ರೂಪಿಸುತ್ತಿದ್ದೇವೆ’ ಎಂದರು.


Spread the love

About Laxminews 24x7

Check Also

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್‌ ಹೇಳಿಕೆ

Spread the love ನವದೆಹಲಿ: ಇತ್ತೀಚೆಗೆ ಕೃತಕ ಬುದ್ಧಿಮತ್ತೆ(ಎಐ) ಚಾಲಿತ ರೊಬೋಟ್‌ ಒಂದು ಕೆಲಸದ ಒತ್ತಡದಿಂದ ಆತ್ಮಹತ್ಯೆಗೆ ಶರಣಾಗಿತ್ತು. ಇದರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ