ಹೊಸದಿಲ್ಲಿ/ಬೆಂಗಳೂರು: ಸಿನೆಮಾ ಪ್ರಿಯರಿಗೊಂದು ಸಿಹಿ ಸುದ್ದಿ. ಸಿನೆಮಾ ಹಾಲ್‌ಗಳಲ್ಲಿ ಶೇ. 50 ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡಬೇಕು ಎಂಬ ನಿಯಮವನ್ನು ತೆಗೆದುಹಾಕಿರುವ ಕೇಂದ್ರ ಸರಕಾರ ಹೆಚ್ಚಿನ ಪ್ರೇಕ್ಷಕರ ಪ್ರವೇಶಕ್ಕೆ ಅನುವು ಮಾಡಿಕೊಟ್ಟಿದೆ.
ಈ ಸಂಬಂಧ ಬುಧವಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಸಿನೆಮಾ ಮಂದಿರ ಮತ್ತು ಈಜುಕೊಳಗಳ ಸಂಬಂಧ ಮಹತ್ವದ ಬದಲಾವಣೆ ಮಾಡಲಾಗಿದೆ. ಆದರೆ ಎಷ್ಟು ಮಂದಿಗೆ ಅವಕಾಶ ಕೊಡಬೇಕು ಎಂಬ ಬಗ್ಗೆ ಶೀಘ್ರದಲ್ಲೇ ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯ ಎಸ್‌ಒಪಿ ಹೊರಡಿಸಲಿದೆ ಎಂದು ಕೇಂದ್ರ ಗೃಹ ಇಲಾಖೆ ತಿಳಿಸಿದೆ.
ಈಜುಕೊಳಗಳ ಮೇಲಿನ ನಿರ್ಬಂಧ ಗಳನ್ನು ಸಂಪೂರ್ಣ ತೆಗೆದುಹಾಕಿ ಎಲ್ಲರಿಗೂ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಹಾಗೆಯೇ ಸಾಮಾಜಿಕ, ಧಾರ್ಮಿಕ, ಕ್ರೀಡೆ, ಸಾಂಸ್ಕೃತಿಕ, ಶೈಕ್ಷಣಿಕ, ಜಾತ್ರೆಗಳಿಗೂ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಆದರೆ ಆಯಾ ರಾಜ್ಯ ಸರಕಾರಗಳ ನಿಯಮಕ್ಕೆ ಅನುಗುಣವಾಗಿ ಇರುತ್ತದೆ ಎಂದು ಹೇಳಿದೆ.
ನಾವು ಕಳೆದ ಕೆಲವು ತಿಂಗಳಿನಿಂದ ಥಿಯೇಟರ್‌ಗಳಲ್ಲಿ ಶೇ. 100ರಷ್ಟು ಪ್ರವೇಶಕ್ಕೆ ಅನುಮತಿ ನೀಡ ಬೇಕು ಎಂದು ಸರಕಾರಕ್ಕೆ ಮನವಿ ಮಾಡುತ್ತಲೇ ಬಂದಿದ್ದೇವೆ. ಆದರೆ ಇಲ್ಲಿಯವರೆಗೆ ಸರಕಾರ ನಮ್ಮ ಮನವಿಯನ್ನು ಪರಿಗಣಿಸಿಲ್ಲ. ಆದಷ್ಟು ಬೇಗ ಈ ಆಗ್ರಹ ಈಡೇರಬಹುದು ಎಂಬ ವಿಶ್ವಾಸವಿದೆ. – ಡಿ.ಆರ್. ಜೈರಾಜ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ
 Laxmi News 24×7
Laxmi News 24×7
				 
		 
						
					