Breaking News

ಮಾಜಿ ಸಚಿವ, ಜೆಡಿಎಸ್ ಶಾಸಕ ಎಂ.ಸಿ ಮನಗುಳಿ ನಿಧನ

Spread the love

ಬೆಂಗಳೂರು: ಸಿಂದಗಿ ಕ್ಷೇತ್ರದ ಜೆಡಿಎಸ್ ಶಾಸಕ, ಮಾಜಿ ಸಚಿವ ಎಂ.ಸಿ ಮನಗುಳಿ ವಿಧಿವಶರಾಗಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಮನಗುಳಿ ಅವರನ್ನು ಕಳೆದ ಶನಿವಾರ ಬೆಂಗಳೂರಿನ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು.

ಮಲ್ಲಪ್ಪ‌ ಚೆನ್ನವೀರಪ್ಪ ಮನಗೂಳಿ ಅವರು ಸತತ ಏಳು ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿ, ಎರಡು ಬಾರಿ ಶಾಸಕರಾಗಿದ್ದರು. 1994ರಲ್ಲಿ ದೇವೇಗೌಡರ ಸಂಪುಟದಲ್ಲಿ ಸಚಿವರಾಗಿದ್ದರು. ಮತ್ತೆ ಕಳೆದ ಕಾಂಗ್ರೆಸ್- ಜೆಡಿಎಸ್‌ ಮೈತ್ರಿ ಸರ್ಕಾರದ ಅವಧಿಯಲ್ಲೂ ತೋಟಗಾರಿಕಾ ಸಚಿವರಾಗಿದ್ದರು. ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿಯನ್ನ ವಹಿಸಿಕೊಂಡಿದ್ದರು.

ಇವರ ಹುಟ್ಟೂರು ಬಸವನ ಬಾಗೇವಾಡಿ ತಾಲೂಕಿನ ಮನಗೂಳಿ. ಪತ್ನಿ ಸಿದ್ದಮ್ಮಗೌಡ್ತಿ ಬಿರಾದಾರ್, 4 ಗಂಡು ಮಕ್ಕಳು ಹಾಗೂ ಓರ್ವ ಹೆಣ್ಣುಮಗಳನ್ನ ಮನಗೂಳಿ ಅಗಲಿದ್ದಾರೆ.


Spread the love

About Laxminews 24x7

Check Also

ಕ್ರಾಂತಿ ಮಹಿಳಾ ಮಂಡಳ ಉಮಾ ಸಂಗೀತ ಪ್ರತಿಷ್ಠಾನದಿಂದ ಹಿರಿಯ ನಾಗರಿಕ ದಿನಾಚರಣೆ ಗುರು, ಹಿರಿಯರನ್ನು ಗೌರವಿಸಿ: ಜಯ ಜೋಶಿ

Spread the love ಕ್ರಾಂತಿ ಮಹಿಳಾ ಮಂಡಳ ಉಮಾ ಸಂಗೀತ ಪ್ರತಿಷ್ಠಾನದಿಂದ ಹಿರಿಯ ನಾಗರಿಕ ದಿನಾಚರಣೆ ಗುರು, ಹಿರಿಯರನ್ನು ಗೌರವಿಸಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ