Breaking News

ವಿಧಾನಪರಿಷತ್‍ ಉಪಸಭಾಪತಿ ಸ್ಥಾನಕ್ಕೆ ಪ್ರಾಣೇಶ್ ನಾಮಪತ್ರ ಸಲ್ಲಿಕೆ

Spread the love

ಬೆಂಗಳೂರು, ಜ.28- ವಿಧಾನಪರಿಷತ್‍ನ ಉಪಸಭಾಪತಿ ಸ್ಥಾನಕ್ಕೆ ಬಿಜೆಪಿಯ ಎಂ.ಕೆ.ಪ್ರಾಣೇಶ್ ಅವರು ಇಂದು ನಾಮಪತ್ರ ಸಲ್ಲಿಸಿದರು. ಇಂದು ಬೆಳಗ್ಗೆ 9.30ಕ್ಕೆ ಪಕ್ಷದ ಮುಖಂಡರೊಂದಿಗೆ ಆಗಮಿಸಿದ ಪ್ರಾಣೇಶ್ ಅವರು ವಿಧಾನಸಭೆಯ ಕಾರ್ಯದರ್ಶಿ ಮಹಾಲಕ್ಷ್ಮಿ ಅವರಿಗೆ ನಾಮಪತ್ರ ಸಲ್ಲಿಸಿದರು. ಒಂದು ವೇಳೆ ಉಪಸಭಾಪತಿ ಸ್ಥಾನಕ್ಕೆ ಯಾರೊಬ್ಬರೂ ನಾಮಪತ್ರ ಸಲ್ಲಿಸದಿದ್ದರೆ ಪ್ರಾಣೇಶ್ ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.ಹಾಗೊಂದು ವೇಳೆ ಕಾಂಗ್ರೆಸ್‍ನಿಂದ ನಾಮಪತ್ರ ಸಲ್ಲಿಕೆಯಾದರೂ ಚುನಾವಣೆಯಲ್ಲಿ ಪ್ರಾಣೇಶ್ ಅವರೇ ವಿಜೇತರಾಗುವುದು ಖಚಿತ. ಈಗಾಗಲೇ ಪರಿಷತ್‍ನಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದರಿಂದ ಪ್ರಾಣೇಶ್ ಅವರ ಆಯ್ಕೆಗೆ ದಾರಿ ಸುಗಮವಾಗಿದೆ. ಸಭಾಪತಿ ಸ್ಥಾನವನ್ನು ಜೆಡಿಎಸ್‍ಗೆ ಬಿಟ್ಟುಕೊಡಲು ತೀರ್ಮಾನಿಸಿರುವುದರಿಂದ ಬಿಜೆಪಿಗೆ ಉಪಸಭಾಪತಿ ಸ್ಥಾನ ದಕ್ಕಲಿದೆ.


Spread the love

About Laxminews 24x7

Check Also

ಗ್ಯಾರಂಟಿ ಯೋಜನೆ ಪರಿಷ್ಕರಣೆ ಮಾಡಬೇಕು, ಸಿಎಂ, ಸಚಿವರು ಏನೂ ಮಾತನಾಡಿಲ್ಲ: ಹೆಚ್.ಎಂ ರೇವಣ್ಣ

Spread the loveಬೆಂಗಳೂರು: ಗ್ಯಾರಂಟಿ ಯೋಜನೆಗಳ  ಪರಿಷ್ಕರಣೆ ಮಾಡುತ್ತೇವೆ, ಆದರೆ ಸಿಎಂ, ಸಚಿವರು ಇನ್ನೂ ಈ ಬಗ್ಗೆ ಮಾತನಾಡಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ