ಬೆಂಗಳೂರು: ರಾಜ್ಯ ವಿಧಾನ ಮಂಡಲ ಅಧಿವೇಶನ ಇಂದು ಪ್ರಾರಂಭವಾಗಿದೆ. ಆದರೆ ಬೆಳಗಾವಿಯಲ್ಲಿ ಅಧಿವೇಶನ ನಡೆಸದೆ, ಬೆಂಗಳೂರಿನಲ್ಲಿಯೇ ಆರಂಭಿಸಿದ್ದಕ್ಕಾಗಿ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿತು.
ಬೆಳಗಾವಿಯಲ್ಲಿ ಅಧಿವೇಶನ ನಡೆಸದಿರುವ ಸರ್ಕಾರದ ನಡೆಯನ್ನು ವಿರೋಧಿಸಿ ಕಾಂಗ್ರೆಸ್ ಸದನದಲ್ಲಿ ಭಿತ್ತಿ ಪತ್ರ ಪ್ರದರ್ಶನ ಮಾಡಿ ಆಕ್ರೋಶ ಹೊರಹಾಕಿತು.
ಬೆಳಗಾವಿಯಲ್ಲಿ ಅಧಿವೇಶನ ನಡೆಸದೆ ಉತ್ತರ ಕರ್ನಾಟಕವನ್ನು ನಿರ್ಲಕ್ಷ್ಯ ಮಾಡಿದ್ದಕ್ಕೆ ಧಿಕ್ಕಾರ ಎಂದು ಬರೆದಿರುವ ಭಿತ್ತಿ ಪತ್ರವನ್ನು ರಾಜ್ಯಪಾಲರ ಭಾಷಣದ ವೇಳೆ ಪ್ರದರ್ಶಿಸಿ ಕಾಂಗ್ರೆಸ್ ಶಾಸಕರು ಆಕ್ರೋಶ ವ್ಯಕ್ತಪಡಿಸಿದರು.

ಸದನದಲ್ಲಿ ಭಿತ್ತಿ ಪತ್ರ ಪ್ರದರ್ಶಿಸಲು ಕಾಂಗ್ರೆಸ್ ಸಿಎಲ್ ಪಿ ಸಭೆಯಲ್ಲಿ ತೀರ್ಮಾನ ಮಾಡಲಾಗಿತ್ತು.
Laxmi News 24×7