Breaking News

ಎಸ್‌ಎಸ್‌ಎಲ್ ಸಿ ಪರೀಕ್ಷಾ ವೇಳಾಪಟ್ಟಿ ಬಿಡುಗಡೆ: ಜೂನ್ 14ರಿಂದ ಪರೀಕ್ಷೆ ಆರಂಭ

Spread the love

ಬೆಂಗಳೂರು: 2020-21ನೇ ಸಾಲಿನ ಎಸ್‌ಎಸ್ ಎಲ್ ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಇಂದು ಘೋಷಣೆ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಜೂನ್ 14ರಿಂದ ಎಸ್‌ಎಸ್‌ಎಲ್ ಸಿ ಪರೀಕ್ಷೆ ಆರಂಭವಾಗಲಿದೆ ಎಂದರು. ಜೂ.14ರಿಂದ ಜೂ.25ರವರೆಗೆ ಪರೀಕ್ಷೆಗಳು ನಡೆಯಲಿದೆ.

ಜೂನ್ 14ರಂದು ಪ್ರಥಮ ಭಾಷೆ, ಜೂ.16 ಗಣಿತ, ಸಮಾಜ ಶಾಸ್ತ್ರ, ಜೂ.18 ದ್ವಿತೀಯ ಭಾಷೆ, ಜೂ. 21 ವಿಜ್ಞಾನ, ಜೂ.23 ತೃತೀಯ ಭಾಷೆ, ಜೂ.25 ಸಮಾಜ ವಿಜ್ಞಾನ ಪರೀಕ್ಷೆಗಳು ನಡೆಯಲಿದೆ.

ಈ ಬಾರಿ ಮೂರು ಗಂಟೆ 15 ನಿಮಿಷಗಳ ಕಾಲ ಪರೀಕ್ಷೆಗಳು ನಡೆಯಲಿದೆ. ಇದು ತಾತ್ಕಾಲಿಕ ವೇಳಾಪಟ್ಟಿಯಾಗಿದ್ದು, ಯಾವುದೇ ವಿದ್ಯಾರ್ಥಿ, ಪೋಷಕರಿಗೆ ಆಕ್ಷೇಪಗಳಿದ್ದರೇ 15 ದಿನಗಳ ಕಾಲಾವಕಾಶದಲ್ಲಿ ತಿಳಿಸಬಹುದು ಎಂದು ಸಚಿವರು ಹೇಳಿದರು.


Spread the love

About Laxminews 24x7

Check Also

ಪ್ರೀತಿಸುವಂತೆ ಸಹಪಾಠಿ ಒತ್ತಾಯಿಸಿದ್ದಕ್ಕೆ ಮಹಡಿ ಮೇಲಿಂದ ಹಾರಿ ವಿದ್ಯಾರ್ಥಿನಿ ಸೂಸೈಡ್

Spread the loveಬೀದರ್: ಪ್ರೀತಿಸುವಂತೆ ಸಹಪಾಠಿ ಒತ್ತಾಯಿಸಿದ್ದಕ್ಕೆ ಬೇಸತ್ತು ಶಾಲೆಯ ಮಹಡಿ ಮೇಲಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ದಾರುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ