Breaking News

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡ ತಿಮಿಂಗಲಗಳನ್ನು ಹಿಡಿಯುವುದು ಬಾಕಿಯಿದೆ

Spread the love

ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ. ಆದರೆ ದೊಡ್ಡ ತಿಮಿಂಗಲಗಳನ್ನು ಹಿಡಿಯುವುದು ಬಾಕಿಯಿದೆ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ.

ಸ್ಯಾಂಡಲ್ ವುಡ್ ಗೆ ಡ್ರಗ್ಸ್ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ನೋಟೀಸ್ ಹಿನ್ನೆಲೆಯಲ್ಲಿ ಮತ್ತೆ ವಿಚಾರಣೆಗೆ ಹಾಜರಾದ ಇಂದ್ರಜಿತ್ ಲಂಕೇಶ್ ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ 6 ತಿಂಗಳಿಂದ ತನಿಖೆಗೆ ಸಹಕಾರ ನೀಡುತ್ತಾ ಬಂದಿದ್ದೇನೆ. ಸಿಸಿ ಅಧಿಕಾರಿಗಳು ಸಣ್ಣ ಸಣ್ಣ ಮೀನುಗಳನ್ನು ಹಿಡಿದಿದ್ದಾರೆ. ಇನ್ನು ದೊಡ್ಡ ತಿಮಿಂಗಿಲಗಳಿವೆ. ಅವುಗಳ್ನನು ಹಿಡಿಯಬೇಕಿದೆ ಎಂದರು.

ಜನಪ್ರತಿನಿಧಿಗಳು, ವಿಪಕ್ಷಗಳು ಅಧಿವೇಶನದಲ್ಲಿ ಈ ವಿಚಾರ ಪ್ರಸ್ತಾಪ ಮಾಡಬೇಕಿದೆ. ಡ್ರಗ್ಸ್ ಸಮಾಜಕ್ಕೆ ಮಾರಕ, ಇದರ ಅಂತ್ಯವಾಗಬೇಕು. ಯುವಪೀಳಿಗೆಯ ದೃಷ್ಟಿಯಿಂದಲಾದರೂ ಇದನ್ನು ಕೊನೆಗಾಣಿಸಬೇಕಿದೆ ಎಂದು ಹೇಳಿದರು.


Spread the love

About Laxminews 24x7

Check Also

ಕೋಕಾ-ಕೋಲಾ ಸಂಸ್ಥೆಯೊಂದಿಗೆ ವಿಜಯಪುರವನ್ನು ಕೈಗಾರಿಕಾ ಕೇಂದ್ರವಾಗಿ ಪರಿಗಣಿಸಲು ಸಚಿವ ಎಂ.ಬಿ.ಪಾಟೀಲ ಚರ್ಚೆ

Spread the love ಕೋಕಾ-ಕೋಲಾ ಸಂಸ್ಥೆಯೊಂದಿಗೆ ವಿಜಯಪುರವನ್ನು ಕೈಗಾರಿಕಾ ಕೇಂದ್ರವಾಗಿ ಪರಿಗಣಿಸಲು ಸಚಿವ ಎಂ.ಬಿ.ಪಾಟೀಲ ಚರ್ಚೆ ಭಾರತದ ಆಹಾರ ಸಂಸ್ಕರಣಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ