Breaking News

ತೆಲುಗಿನಲ್ಲಿ ಯಾವುದೇ ಸಿನಿಮಾ ಬಿಡುಗಡೆಯಾದರೂ ಅಲ್ಲಿ ಕನ್ನಡ ಚಿತ್ರಗಳ ಬಿಡುಗಡೆಗೆ ಅವಕಾಶ ನೀಡುತ್ತಿಲ್ಲ.

Spread the love

ಬೆಂಗಳೂರು: ತೆಲುಗು ಚಿತ್ರರಂಗದ ಹೊಸ ನೀತಿ ವಿರುದ್ಧ ಸಿಡಿದೆದ್ದ ಚಾಲೇಂಜಿಂಗ್ ಸ್ಟಾರ್ ದರ್ಶನ್, ಕನ್ನಡ ಚಿತ್ರಗಳ ಬಿಡುಗಡೆ ತಡೆದು, ತೆಲುಗಿನ ಚಿತ್ರವನ್ನು ಬಿಡಿಗಡೆ ಮಾಡಲು ಅವಕಾಶ ನೀಡಿರುವುದು ಸರಿಯಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.

ತೆಲುಗಿನಲ್ಲಿ ಯಾವುದೇ ಸಿನಿಮಾ ಬಿಡುಗಡೆಯಾದರೂ ಅಲ್ಲಿ ಕನ್ನಡ ಚಿತ್ರಗಳ ಬಿಡುಗಡೆಗೆ ಅವಕಾಶ ನೀಡುತ್ತಿಲ್ಲ. ಸಣ್ಣಪುಟ್ಟ ಸಿನಿಮಾ ರಿಲೀಸ್ ಇದ್ರೂ ಕನ್ನಡ ಚಿತ್ರಗಳ ಬಿಡುಗಡೆಯನ್ನು ತಡೆ ಹಿಡಿಯಲಾಗುತ್ತಿದೆ. ಆದರೆ ಕರ್ನಾಟಕದಲ್ಲಿ ತೆಲುಗಿನ ಯಾವ ಚಿತ್ರವನ್ನು, ಯಾವಾಗಬೇಕಾದರೂ ಬಿಡುಗಡೆ ಮಾಡಬಹುದು ಈ ಹೊಸ ನೀತಿ ಸರಿಯಲ್ಲ ಎಂದು ದರ್ಶನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಯಾಂಡಲ್ ವುಡ್ ನ ಹಲವು ಚಿತ್ರಗಳು ತೆಲುಗಿನಲ್ಲೂ ಬಿಡುಗಡೆಯಾಗುತ್ತಿವೆ. ಆದರೆ ಟಾಲಿವುಡ್ ಹೊಸ ನೀತಿಯಿಂದ ಕನ್ನಡದದ ಹಲವು ಚಿತ್ರಗಳು ಸಂಕಷ್ಟಕ್ಕೆ ಸಿಲುಕಿವೆ. ಹೀಗಾಗಿ ನಮ್ಮಲ್ಲೂ ತೆಲುಗು ಚಿತ್ರಗಳನ್ನು ತಡೆ ಹಿಡಿಯಬೇಕು ಎಂದು ಫಿಲ್ಮ್ ಚೇಂಬರ್ ನಲ್ಲಿ ದರ್ಶನ್ ಚರ್ಚೆ ನಡೆಸಲು ಮುಂದಾಗಿದ್ದಾರೆ.


Spread the love

About Laxminews 24x7

Check Also

ಒಂದು ವಾರ ಸಹಕಾರ ಕೊಟ್ಟರೆ ಹೋಟೆಲ್‌ಗಳಿಗೆ ಸಿಲಿಂಡರ್ ಕೊಡ್ತೀವಿ: ಕೆ.ಹೆಚ್. ಮುನಿಯಪ್ಪ

Spread the loveಬೆಂಗಳೂರು: ಒಂದು ವಾರ ಹೋಟೆಲ್‌ಗಳು  ಗ್ಯಾಸ್ ಸಿಲಿಂಡರ್‌ಗಾಗಿ  ಸಹಕಾರ ಕೊಡಬೇಕು ಎಂದು ಆಹಾರ ಮತ್ತು ನಾಗರಿಕ ಪೂರೈಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ