Breaking News
Home / ರಾಜ್ಯ / ಬಿಜೆಪಿ-ಜೆಡಿಎಸ್‍ನ ಮೈತ್ರಿಗೆ ಜಯ : ಉಪಸಭಾಪತಿಯಾಗಿ ಪ್ರಾಣೇಶ್ ಆಯ್ಕೆ

ಬಿಜೆಪಿ-ಜೆಡಿಎಸ್‍ನ ಮೈತ್ರಿಗೆ ಜಯ : ಉಪಸಭಾಪತಿಯಾಗಿ ಪ್ರಾಣೇಶ್ ಆಯ್ಕೆ

Spread the love

ಬೆಂಗಳೂರು,ಜ.29-ಬಿಜೆಪಿ-ಜೆಡಿಎಸ್‍ನ ಮೈತ್ರಿಗೆ ವಿಧಾನಪರಿಷತ್‍ನಲ್ಲಿ ಮದಲ ಹಂತದ ಯಶಸ್ಸು ಸಿಕ್ಕಿದ್ದು, ಬಿಜೆಪಿ ಸದಸ್ಯ ಎಂ.ಕೆ.ಪ್ರಾಣೇಶ್ ಉಪಸಭಾಪತಿಯಾಗಿ ಬಹುಮತದಿಂದ ಆಯ್ಕೆಯಾಗಿದ್ದಾರೆ. ವಿಧಾನಪರಿಷತ್ ಸುಪಸಭಾಪತಿ ಸ್ಥಾನಕ್ಕೆ ನಿನ್ನೆ ಎಂ.ಕೆ.ಪ್ರಾಣೇಶ್ ಮತ್ತು ಕಾಂಗ್ರೆಸ್‍ನ ಕೆ.ಸಿ.ಕೊಂಡಯ್ಯ ನಾಮಪತ್ರ ಸಲ್ಲಿಸಿದ್ದರು. ಇಂದು ಬೆಳಗ್ಗೆ ನಡೆದ ಚುನಾವಣೆಯ ಪ್ರಕ್ರಿಯೆಯಲ್ಲಿ ಎಂ.ಕೆ.ಪ್ರಾಣೇಶ್ 41 ಮತಗಳನ್ನು ಪಡೆದು ಚುನಾಯಿತರಾದರು. ಕಾಂಗ್ರೆಸ್‍ನ 24 ಸದಸ್ಯರು ವಿರುದ್ಧವಾಗಿ ಮತ ಹಾಕಿದರು. ಪ್ರಾಣೇಶ್ ಪರವಾಗಿ ಜೆಡಿಎಸ್‍ನ ಸದಸ್ಯರು ಮತ ಚಲಾಯಿಸಿದ್ದು ವಿಶೇಷವಾಗಿತ್ತು.ಮೂರು ಪಕ್ಷಗಳು ಉಪಸಭಾಪತಿ ಚುನಾವಣೆ ಹಿನ್ನೆಲೆಯಲ್ಲಿ ತಮ್ಮ ಸದಸ್ಯರಿಗೆ ವಿಪ್ ಜಾರಿ ಮಾಡಿದ್ದವು. ಹೀಗಾಗಿ ಬಿಜೆಪಿಯ31, ಜೆಡಿಎಸ್ 13 ಮಂದಿ ಸದಸ್ಯರು ಪ್ರಾಣೇಶ್ ಪರವಾಗಿ ಮತ ಚಲಾಯಿಸಿದರು. ಕಾಂಗ್ರೆಸ್ 28 ಸದಸ್ಯರ ಪೈಕಿ ನಾಲ್ಕು ಮಂದಿ ಗೈರು ಹಾಜರಾಗಿದ್ದರು.


Spread the love

About Laxminews 24x7

Check Also

ಬಹುಭಾಷಾ ನಟ ಪ್ರಕಾಶ್ ರೈ ಮತ ಚಲಾಯಿಸಿದ್ದು ಯಾರಿಗೆ ಗೊತ್ತಾ?

Spread the love ಲೋಕಸಭೆ ಚುನಾವಣೆ 2024 ರ ಎರಡನೇ ಹಂತದಲ್ಲಿ ಇಂದು ಶುಕ್ರವಾರ (ಏಪ್ರಿಲ್ 26) ಆರಂಭವಾಗಿದೆ. 13 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ