Breaking News

65 ಸಾವಿರ ರೂಪಾಯಿ ಹಣದ ಬೇಡಿಕೆ ಇಟ್ಟಿದ್ದ ಇಬ್ಬರು ಸೆಕ್ಷನ್ ಅಧಿಕಾರಿಗಳು ಎಸಿಬಿ ಬಲೆಗೆ

Spread the love

 

ಬೆಳಗಾವಿ: ಜಮೀನಿನಲ್ಲಿದ್ದ ಟಿ.ಸಿ ಬದಲಿಸಿ ಹೊಸ ಟಿ.ಸಿ ಮಂಜೂರು ಮಾಡಿಕೊಡಲು 65,000 ರೂಪಾಯಿ ಲಂಚ ಪಡೆಯುತ್ತಿದ್ದ ಹೆಸ್ಕಾಂನ ಇಬ್ಬರು ಸೆಕ್ಷನ್ ಅಧಿಕಾರಿಗಳು ಎಸಿಬಿ ಬಲೆಗೆ ಬಿದ್ದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಹೆಸ್ಕಾಂ ಲೋಳುಸರ ಸೆಕ್ಷನ್ ಆಫೀಸರ್ ಪ್ರಕಾಶ್ ವಿರೂಪಾಕ್ಷ ಪರೀಟ್ ಮತ್ತು ಮೇಲ್ವಿಚಾರಕ ಮಲ್ಲಯ್ಯ ಕುಮಾರಸ್ವಾಮಿ ಹಿರೇಮಠ ಎಸಿಬಿ ಬಲೆಗೆ ಬಿದ್ದ ಅಧಿಕಾರಿಗಳು.

ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕು ಅರಂಭಾವಿ ಗ್ರಾಮದ ನಿವಾಸಿ ಆನಂದ ಉದ್ದಪ್ಪ ತಮ್ಮ ಜಮೀನಿನಲ್ಲಿರುವ ಟಿ.ಸಿಗೆ ವಿದ್ಯುತ್ ಲೀಡ್ ಹೆಚ್ಚಾಗಿ ಹಾಳಾಗುತ್ತಿರುವುದರಿಂದ ಹೊಸ ಟಿ.ಸಿ ಹಾಕಿಕೊಡುವಂತೆ ಅಧಿಕಾರಿಗಳಲ್ಲಿ ಮನವಿ ಮಾಡಿದ್ದರು. ಇದಕ್ಕೆ ಅಧಿಕಾರಿಗಳಿಬ್ಬರೂ 65 ಸಾವಿರ ರೂಪಾಯಿ ಹಣದ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಆನಂದ ಅವರು ಎಸಿಬಿಗೆ ದೂರು ನೀಡಿದ್ದರು.

ಹೆಸ್ಕಾಂ ಅಧಿಕಾರಿಗಳಿಬ್ಬರೂ 65 ಸಾವಿರ ರೂ ಲಂಚದ ಹಣವನ್ನು ಸ್ವೀಕರಿಸುತ್ತಿದ್ದ ವೇಳೆಯೇ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಬೆಳಗಾವಿ ಉತ್ತರ ವಲಯದ ಎಸಿಬಿ ಪೊಲೀಸ್ ಅಧೀಕ್ಷಕ ಬಿ.ಎಸ್.ನೇಮಗೌಡ ಅವರ ಮಾರ್ಗದಶನದಲ್ಲಿ ಈ ದಾಳಿ ನಡೆದಿದ್ದು, ಸದ್ಯ ಆರೋಪಿ ಅಧಿಕಾರಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ


Spread the love

About Laxminews 24x7

Check Also

ಪಂಚ ಗ್ಯಾರಂಟಿಗಳಿಗಾಗಿ ₹63 ಸಾವಿರ ಕೋಟಿ ಸಾಲ ಮಾಡಿದ ರಾಜ್ಯ ಸರ್ಕಾರ: ಸಿಎಜಿ ವರದಿ

Spread the love ಬೆಂಗಳೂರು: ಪಂಚ ಗ್ಯಾರಂಟಿಗಳಿಗಾಗಿ 2023-24 ಸಾಲಿನಲ್ಲಿ ಸಂಪನ್ಮೂಲ ಒದಗಿಸಲು ರಾಜ್ಯ ಸರ್ಕಾರ 63 ಸಾವಿರ ಕೋಟಿ ರೂಪಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ