Breaking News
Home / ರಾಜ್ಯ / ಕೆಎಲ್ಇ ಸಂಸ್ಥೆಯ ಆಸ್ಪತ್ರೆಯಲ್ಲಿ ಉಚಿತ ಹೆರಿಗೆ

ಕೆಎಲ್ಇ ಸಂಸ್ಥೆಯ ಆಸ್ಪತ್ರೆಯಲ್ಲಿ ಉಚಿತ ಹೆರಿಗೆ

Spread the love

ಮಾಂಜರಿ –  ಶಿಕ್ಷಣದ ಜೊತೆಗೆ ಸಾಮಾನ್ಯ ಜನರ ಆರೋಗ್ಯ ಕಾಪಾಡಲು ಕೆಎಲ್ಇ ಶಿಕ್ಷಣ ಸಂಸ್ಥೆ ಕಾರ್ಯನಿರ್ವಹಿಸುತ್ತಿದ್ದು ಮುಂದಿನ ದಿನಗಳಲ್ಲಿ ಎಲ್ಲರ ಆರೋಗ್ಯ ಮತ್ತು ಸದೃಢ ಸಮಾಜ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಜೊತೆಗೆ ಗ್ರಾಮೀಣ ಭಾಗದಲ್ಲಿರುವ ಮಹಿಳೆಯರ ಆರೋಗ್ಯ ಕಾಪಾಡಲು ಉಚಿತ ಆರೋಗ್ಯ ತಪಾಸಣೆ ಮತ್ತು ಬೆಳಗಾವಿಯ ಕೆಎಲ್ಇ ಸಂಸ್ಥೆಯ ಆಸ್ಪತ್ರೆಯಲ್ಲಿ ಉಚಿತ ಹೆರಿಗೆ ಮಾಡಲಾಗುವುದು ಎಂದು ಕೆಎಲ್ಇ  ಶಿಕ್ಷಣ ಸಂಸ್ಥೆಯ ಕಾರ್ಯಾಧ್ಯಕ್ಷ ಹಾಗೂ ಮಾಜಿ ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ ಹೇಳಿದರು.

ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದ ಶಿವಾಲಯದಲ್ಲಿ ಜಿಲ್ಲಾ ಪಂಚಾಯತಿ ಬೆಳಗಾವಿ ಕೆ ಎಲ್ ಇ ಸಂಸ್ಥೆಯ ಜವಾಹರಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯದ ಆಶ್ರಯದಲ್ಲಿ ಮಹಿಳೆಯರ ಮತ್ತು ಮಕ್ಕಳ ಆರೋಗ್ಯ ಸಂಶೋಧನಾ ಘಟಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಮುದಾಯ ಆರೋಗ್ಯ ಕೇಂದ್ರ ಎಕ್ಸಂಬಾ, ಪ್ರಾಥಮಿಕ ಆರೋಗ್ಯ ಕೇಂದ್ರ ಅಂಕಲಿ, ಪ್ರಾಥಮಿಕ ಆರೋಗ್ಯ ಕೇಂದ್ರ ಯಡೂರು ಮತ್ತು ಸದಲಗಾ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಅನೇಮಿಯ ಮುಕ್ತ ಭಾರತ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಪ್ರಭಾಕರ್ ಕೋರೆ ಮಾತನಾಡುತ್ತಿದ್ದರು.

ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಮಿರಜ್ ಖ್ಯಾತ ಸ್ತ್ರೀರೋಗ ತಜ್ಞ ಡಾ ಸೋಮಶೇಖರ್ ಪಾಟೀಲ್ ಡಾ ಶಿವಪ್ರಸಾದ್ ಗೌಡರ, ಎಂ ಬಿ ಬೆಲೆದ, ತಾಲೂಕ ಆರೋಗ್ಯ ಅಧಿಕಾರಿಗಳಾದ ಡಾ ವಿಠ್ಠಲ್ ಶಿಂಡೆ , ಸಂತೋಷ್ ಕುನ್ನೂರ, ಸಿಡಿಪಿಓ ದೀಪಾ ಕಾಳೆ, ಡಾ ಮಂಜುನಾಥ್ ಸೋಮಣ್ಣವರ್, ಡಾ ಉಮೇಶ್ ಚರಂತಿಮಠ ಹಾಜರಿದ್ದರು.
ಸ್ವಾಗತ ಡಾ ಮಹೇಶ್ ಕುಂಬಾರ್, ಪ್ರಾಸ್ತಾವಿಕ ಡಾ ಶಿವಪ್ರಸಾದ್ ಗೌಡರ ಮಾಡಿದರು,
ಪ್ರಭಾಕರ್ ಕೋರೆ, ಸೋಮಶೇಖರ್ ಪಾಟೀಲ್ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಈ ವೇಳೆ ಡಾ ಸೋಮಶೇಖರ್ ಪಾಟೀಲ್ ಡಾ ವಿಠ್ಠಲ್ ಶಿಂದೆ ತಮ್ಮ ಅನಿಸಿಕೆ ವ್ಯಕ್ತಪಡಿಸಿ ಮಹಿಳೆಯರಿಗೆ ರಕ್ತಹೀನತೆ ಕುರಿತು ಸವಿಸ್ತಾರವಾಗಿ ಗರ್ಭಿಣಿಯರಿಗೆ ಮಾರ್ಗದರ್ಶನ ನೀಡಿದರು. ಕಾರ್ಯಕ್ರಮದ ನಿರೂಪಣೆ ನಿರ್ಮಲಾ ಸಾಂಗಾವೆ, ಗೀತಾ ಮೂಳೆ ವಂದಿಸಿದರು


Spread the love

About Laxminews 24x7

Check Also

ನೇಹಾ ಕೊಲೆ ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಮುಸ್ಲಿಂ ಸಮುದಾಯದಿಂದ ಪ್ರತಿಭಟನೆ

Spread the loveಹುಬ್ಬಳ್ಳಿ : ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿ ನೇಹಾ ಹಿರೇಮಠ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಆರೋಪಿ ಫಯಾಝ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ