Breaking News
Home / ರಾಜ್ಯ / “ಕರ್ನಾಟಕಕ್ಕೆ ಮಹಾದಾಯಿ ನದಿಯ 1 ಹನಿ ನೀರನ್ನೂ ಕೊಡಲ್ಲ”

“ಕರ್ನಾಟಕಕ್ಕೆ ಮಹಾದಾಯಿ ನದಿಯ 1 ಹನಿ ನೀರನ್ನೂ ಕೊಡಲ್ಲ”

Spread the love

ಪಣಜಿ,ಜ.30- ನನ್ನ ಪಕ್ಷದವರೇ ಇರಲಿ ಅಥವಾ ಬೇರೆ ಯಾರೇ ಇರಲಿ ರಾಜ್ಯದ ಹಿತ ಕಡೆಗಣಿಸಿ ಮಹಾದಾಯಿ ನದಿಯಿಂದ ಒಂದೂ ಹನಿಯನ್ನೂ ಕರ್ನಾಟಕಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎನ್ನುವ ಮೂಲಕ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮತ್ತೆ ಕ್ಯಾತೆ ತೆಗೆದಿದ್ದಾರೆ. ವಿರೋಧ ಪಕ್ಷಗಳು ವಿಧಾನಸಭೆಯಲ್ಲಿ ಮಂಡಿಸಿದ್ದ ನಿಲುವಳಿ ಸೂಚನೆ ಮೇಲೆ ಉತ್ತರಿಸಿರುವ ಪ್ರಮೋದ್ ಸಾವಂತ್, ಮಹದಾಯಿಯಿಂದ ನೀರು ಹರಿಸುವಂತೆ ನನ್ನ ಪಕ್ಷವೇ ನನ್ನ ಮೇಲೆ ಒತ್ತಡ ಹಾಕಿದರೂ ನಾನು ಭಾಗುವುದಿಲ್ಲ ಎಂದು ಕಡ್ಡಿ ಮುರಿದಂತೆ ಹೇಳಿದ್ದಾರೆ.

ಇದರಿಂದಾಗಿ ಉತ್ತರ ಕರ್ನಾಟಕದ ಬೆಳಗಾವಿ, ಹುಬ್ಬಳ್ಳಿ, ಧಾರವಾಡ, ಗದಗ ಸೇರಿದಂತೆ ಮತ್ತಿತರ ಭಾಗಗಳಿಗೆ ಶಾಶ್ವತ ಕುಡಿಯುವ ನೀರು ಪೂರೈಕೆ ಮಾಡುವ ಮಹದಾಯಿ ನದಿ ನೀರು ಯೋಜನೆ ಇನ್ನಷ್ಟು ವಿಳಂಬವಾಗುವ ಸಾಧ್ಯತೆ ನಿಚ್ಚಳವಾಗಿದೆ. ನನ್ನ ಸರ್ಕಾರ ರಾಜ್ಯದ ಹಿತವನ್ನು ಯಾವುದೇ ಸಂದರ್ಭದಲ್ಲೂ ಕಡೆಗಣಿಸುವುದಿಲ್ಲ.

ನಿಯೋಗವು ಈಗಾಗಲೇ ಪ್ರಧಾನಿ ನರೇಂದ್ರಮೋದಿ ಅವರನ್ನು ಭೇಟಿಯಾದಾಗಲೇ ನಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದೇವೆ. ಪಕ್ಷ ಮತ್ತು ಸರ್ಕಾರಕ್ಕಿಂತ ರಾಜ್ಯದ ಜನರ ಹಿತವೇ ನನಗೆ ಮುಖ್ಯ. ಇದರಲ್ಲಿ ರಾಜಿಯಗುವ ಪ್ರಶ್ನೆಯೇ ಇಲ್ಲ ಎಂದು ಸಾವಂತ್ ಸ್ಪಷ್ಟಪಡಿಸಿದ್ದಾರೆ.

ಪ್ರತಿಪಕ್ಷದ ನಾಯಕ ದಿಗಂಬರ್ ಕಾಮತ್ ಹಾಗೂ ಶಾಸಕರಾದ ವಿಜಯ್ ಸರ್‍ದೇಸಾಯಿ, ರೋಹನ್ ಕೌಂಟೆ ಸೇರಿದಂತೆ ಮತ್ತಿತರ ಸದಸ್ಯರು, ಕರ್ನಾಟಕವು ಮಹದಾಯಿನದಿ ನೀರನ್ನು ಹರಿಸಿಕೊಳ್ಳಲು ಮುಂದಾಗಿದೆ. ಇಲ್ಲಿನ ಸರ್ಕಾರ ಕೂಡ ಈ ಯೋಜನೆಗೆ ಅನುಮತಿ ನೀಡಿದೆ. ನೀವು ರಾಜ್ಯದ ಜನತೆಯ ಹಿತಾಸಕ್ತಿಯನ್ನು ಕಡೆಗಣಿಸಿದ್ದೀರೆಂದು ಆರೋಪಿಸಿದರು.

ಇದಕ್ಕೆ ಉತ್ತರಿಸಿದ ಸಾವಂತ್, ಈ ಯೋಜನೆಗೆ ನಾವು ಈಗಾಗಲೇ ಬಹಿರಂಗವಾಗಿಯೇ ವಿರೋಧಿಸಿದ್ದೇವೆ. ಕರ್ನಾಟಕ ಸುಪ್ರೀಂ ಕೋರ್ಟ್ ಮತ್ತು ನ್ಯಾಯಾಧೀಕರಣ ಆದೇಶವನ್ನು ಉಲ್ಲಂಘಿಸಿ ಕಾಮಗಾರಿ ಆರಂಭಿಸಿದೆ ಎಂದು ನಾವು ನ್ಯಾಯಾಂಗ ನಿಂದನೆ ಅರ್ಜಿ ಹಾಕಿದ್ದೇವೆ. ಎಂಥ ಸಂದರ್ಭದಲ್ಲೂ ಇದಕ್ಕೆ ಅವಕಾಶ ಕೊಡುವುದಿಲ್ಲ ಎಂದು ಹೇಳಿದ್ದಾರೆ.

ಯೋಜನೆಯನ್ನು ಆರಂಭಿಸಲು ನಾವು ಕರ್ನಾಟಕಕ್ಕೆ ಅವಕಾಶ ಕೊಡುವುದಿಲ್ಲ. ಕಾನೂನು ಹೋರಾಟದಲ್ಲಿ ನಮಗೆ ಹಿನ್ನಡೆಯಾಗಿಲ್ಲ. ನಮ್ಮ ವಕೀಲರು ನ್ಯಾಯಾಲಯದಲ್ಲಿ ಸಮರ್ಥವಾಗಿ ವಾದ ಮಂಡಿಸಿದ್ದಾರೆ. ನೆರೆಯ ರಾಜ್ಯ ನ್ಯಾಯಾಲಯದ ಅನುಮತಿ ಇಲ್ಲದೆ ಕಾಮಗಾರಿ ಆರಂಭಿಸಲು ಅವಕಾಶವಿಲ್ಲ.

2018ರಲ್ಲೇ ಯೋಜನೆಗೆ ಕೋರ್ಟ್ ತಡೆಯಾಜ್ಞೆ ಕೊಟ್ಟಿದೆ. ಮಹದಾಯಿ ಯೋಜನೆ ಅನುಷ್ಠಾನ ಮಾಡುವುದರಿಂದ ನಮ್ಮ ರಾಜ್ಯಕ್ಕೆ ಹೆಚ್ಚಿನ ಅನ್ಯಾಯವಾಗಲಿದೆ. ಪರಿಸರ, ಪ್ರಾಣಿ ಸಂಕುಲದ ಮೇಲೂ ಪರಿಣಾಮ ಬೀರಲಿದೆ. ಗೋವಾ ಜನರ ಹಿತಾಸಕ್ತಿ ಕಡೆಗಣಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಅಲ್ಲಿನ ನೀರಾವರಿ ಸಚಿವ ನೇರಿ ರೋಡ್ರಿ ಗೋಸ್ ಹೇಳಿದ್ದಾರೆ.

ನಾವು ಸುಪ್ರೀಂಕೋರ್ಟ್‍ನಲ್ಲಿ ಇದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದೇವೆ. ಆದರೆ ಕೋವಿಡ್ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆ ವಿಳಂಬವಾಗಿದೆ. ನಮಗೆ ನ್ಯಾಯಾಲಯದಲ್ಲಿ ನ್ಯಾಯ ಸಿಗುವ ವಿಶ್ವಾಸವಿದೆ. ಈ ಬಗ್ಗೆ ಯಾರಿಗೂ ಯಾವುದೇ ರೀತಿಯ ಆತಂಕ ಬೇಡ ಎಂದು ಸದನಕ್ಕೆ ಅಭಯ ನೀಡಿದರು.

ಉತ್ತರ ಕರ್ನಾಟಕದಲ್ಲಿ ಕುಡಿಯುವ ನೀರು ಪೂರೈಕೆ ಮಾಡುವ ಸದುದ್ದೇಶದಿಂದ ಕರ್ನಾಟಕ ಮಹದಾಯಿ ನದಿಯಿಂದ ಕಳಸಾ ಬಂಡೂರಿ ನಾಲಾ ಮೂಲಕ ಯೋಜನೆಯನ್ನು ಪ್ರಾರಂಭಿಸಲು ಮುಂದಾಗಿದೆ.

2018ರ ಆಗಸ್ಟ್‍ನಲ್ಲಿ ನ್ಯಾಯಾಧೀಕರಣ ತೀರ್ಪು ನೀಡಿ ಕರ್ನಾಟಕಕ್ಕೆ 13.42 ಟಿಎಂಸಿ ನೀರು ಬಳಕೆ ಮಾಡಿಕೊಂಡು ಯೋಜನೆ ಅನುಷ್ಠಾನ ಮಾಡಬಹುದೆಂದು ತೀರ್ಪು ನೀಡಿತ್ತು. ಆದರೆ ಇದಕ್ಕೆ ವಿರೋಧಿಸಿದ ಗೋವಾ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿದೆ.


Spread the love

About Laxminews 24x7

Check Also

ಹುಬ್ಬಳ್ಳಿ-ಧಾರವಾಡದ ಜನ ಹೊರ ಹಾಕಿದ್ದಾರೆ. ಬೆಳಗಾವಿ ಜಿಲ್ಲೆಗೆ ಜಗದೀಶ್​​ ಶೆಟ್ಟರ್‌ ಕೊಡುಗೆ ಏನು? ಲಕ್ಷ್ಮೀ ಹೆಬ್ಬಾಳ್ಕರ್

Spread the love  ಬೆಳಗಾವಿಯಲ್ಲಿ ಮಾತನಾಡಿದ ಸಚಿವೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಇದು ನನ್ನ ಕರ್ಮ ಭೂಮಿ ಅಂದ್ರೆ ಸುಮ್ಮನಿರಬೇಕಾ? …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ