Breaking News

ರಾಮಮಂದಿರ ನಿರ್ಮಾಣ | ತಾಂತ್ರಿಕ ಉಸ್ತುವಾರಿಯಾಗಿ ಕೋಟೆ ನಾಡಿನ ಎಂಜಿನಿಯರ್ ನೇಮಕ ; ಸಚಿವ ರಮೇಶ್ ಜಾರಕಿಹೊಳಿ‌ ಹರ್ಷ

Spread the love

ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಭವ್ಯ ಶ್ರೀ ರಾಮಚಂದ್ರನ ದೇವಾಲಯದ ತಾಂತ್ರಿಕ ಉಸ್ತುವಾರಿಯಾಗಿ ನೇಮಕವಾಗಿರುವ ದೇಶದ ಹಿರಿಯ ಜಿಯೋ ಟೆಕ್ನಿಕಲ್ ಎಂಜಿನಿಯರ್, ಕನ್ನಡಿಗ ಪ್ರೊ. ಟಿಜಿ ಸೀತಾರಾಮ್‌ ಅವರಿಗೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಶುಭಾಶಯ ತಿಳಿಸಿದ್ದಾರೆ.

ಗುವಾಹಟಿ ಐಐಟಿ ನಿರ್ದೇಶಕರಾಗಿರುವ ಚಿತ್ರದುರ್ಗ ಮೂಲದ ಪ್ರೊ. ಟಿಜಿ ಸೀತಾರಾಮ್, ಜಿಯೋ ಟೆಕ್ನಿಕಲ್ ಎಂಜಿನಿಯರಿಂಗ್ ನಲ್ಲಿ ನುರಿತ ತಜ್ಞರಾಗಿದ್ದು, ಇವರ ತಂಡದ ಸಲಹೆಯಂತೆಯೇ ‘ಶ್ರೀ ರಾಮ ಮಂದಿರ’ ದ ತಳಪಾಯದ ಕೆಲಸ ನಡೆಯುತ್ತದೆ. ಇವರ ಮಾರ್ಗದರ್ಶನದಲ್ಲಿ ಭವ್ಯವಾದ, ಯಾವುದೇ ಕಂಪನಗಳಿಗೆ ಅಲುಗಾಡದ ಹಾಗೆ ಪ್ರಭು ಶ್ರೀ ರಾಮನ ಮಂದಿರ ನಿರ್ಮಾಣವಾಗಲಿ ಎಂಬ ಹಾರೈಕೆಯೊಂದಿಗೆ ಸೀತಾರಾಮ್ ಅವರಿಗೆ ಶುಭಾಶಯಗಳು ಎಂದು ಅವರು ಹೇಳಿದ್ದಾರೆ.


Spread the love

About Laxminews 24x7

Check Also

ಕೆಪಿಎಸ್‌ಸಿ ನೇಮಕಾತಿ ಅಕ್ರಮ- ಎಸ್‌ಐಟಿ ರಚನೆಗೆ ಸುಪ್ರೀಂ ತಡೆ

Spread the loveನವದೆಹಲಿ: ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಕೆಪಿಎಸ್‌ಸಿ  ನೇಮಕಾತಿ ಹಗರಣದ ತನಿಖೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ