Breaking News

ಯಾವುದೇ ದಾಖಲೆ ನೀಡದೆ ಆಧಾರ್ ಕಾರ್ಡ್ ಗೆ ಮೊಬೈಲ್ ನಂಬರ್ ಲಿಂಕ್ ಮಾಡಿ

Spread the love

ಆಧಾರ್ ಕಾರ್ಡ್ ಗುರುತಿನ ಪ್ರಮುಖ ದಾಖಲೆಯಾಗಿದೆ. ಯುನಿಕ್ ಐಡೆಂಟಿಫಿಕೇಶನ್ ಅಥಾರಿಟಿ ಆಫ್ ಇಂಡಿಯಾ ಇದನ್ನು ನಿರಂತರವಾಗಿ ನವೀಕರಿಸುತ್ತಿದೆ. ನವೀಕರಣದ ಪ್ರಕ್ರಿಯೆಯನ್ನು ಯುಐಡಿಎಐ ಸುಲಭಗೊಳಿಸಲಾಗುತ್ತಿದೆ. ಆಧಾರ್ ಕಾರ್ಡನ್ನು ಮೊಬೈಲ್ ನಂಬರ್ ಗೆ ಲಿಂಕ್ ಮಾಡಬೇಕು. ಒಂದು ವೇಳೆ ಹೊಸ ನಂಬರ್ ಪಡೆದಿದ್ದರೆ ಅದನ್ನು ನವೀಕರಿಸಬೇಕಾಗುತ್ತದೆ.

ಈಗ ಯುಐಡಿಎಐ ಮೊಬೈಲ್ ನಂಬರ್ ನವೀಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದೆ. ಆಧಾರ್ ಕಾರ್ಡ್‌ನಲ್ಲಿರುವ ಮೊಬೈಲ್ ಸಂಖ್ಯೆಯನ್ನು ನವೀಕರಿಸುವ ಪ್ರಕ್ರಿಯೆಯನ್ನು ಸುಲಭಗೊಳಿಸಿದೆ. ಯಾವುದೇ ದಾಖಲೆಗಳಿಲ್ಲದೆ ಆಧಾರ್‌ನಲ್ಲಿ ಮೊಬೈಲ್ ಸಂಖ್ಯೆಯನ್ನು ನವೀಕರಿಸಬಹುದು.

ಮೊಬೈಲ್ ಸಂಖ್ಯೆಯನ್ನು ಆಧಾರ್‌ಗೆ ಲಿಂಕ್ ಮಾಡಲು ಆಧಾರ್ ಕೇಂದ್ರಕ್ಕೆ ಹೋಗಬೇಕು. ಆನ್‌ಲೈನ್ ನಲ್ಲಿ ಮೊಬೈಲ್ ಸಂಖ್ಯೆಗಳನ್ನು ಲಿಂಕ್ ಮಾಡಲು ಸಾಧ್ಯವಿಲ್ಲ. ಆನ್‌ಲೈನ್ ಮಾಧ್ಯಮದ ಮೂಲಕ ಹತ್ತಿರದ ಆಧಾರ್ ಕೇಂದ್ರಕ್ಕೆ ಅಪಾಯಿಂಟ್ಮೆಂಟ್ ತೆಗೆದುಕೊಳ್ಳಬಹುದು.

ಯುಐಡಿಎಐ ಬಿಡುಗಡೆ ಮಾಡಿದ ಇತ್ತೀಚಿನ ನವೀಕರಣದ ಪ್ರಕಾರ, ಸಂಖ್ಯೆಯನ್ನು ಆಧಾರ್ ಕಾರ್ಡ್‌ನೊಂದಿಗೆ ಲಿಂಕ್ ಮಾಡಲು ಯಾವುದೇ ದಾಖಲೆಗಳ ಅಗತ್ಯವಿಲ್ಲ. ಆಧಾರ್ ಕಾರ್ಡನ್ನು ಹತ್ತಿರದ ಆಧಾರ್ ಕೇಂದ್ರಕ್ಕೆ ತೆಗೆದುಕೊಂಡು ಹೋಗಿ ಮೊಬೈಲ್ ಸಂಖ್ಯೆಯನ್ನು ನವೀಕರಿಸಬೇಕು. ಇದಕ್ಕೆ 50 ರೂಪಾಯಿ ಶುಲ್ಕ ಪಾವತಿಸಬೇಕಾಗುತ್ತದೆ.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ