Breaking News
Home / ರಾಜ್ಯ / ಮಹದಾಯಿ ನೀರು ಕೊಡಲ್ಲ ಎಂದ ಗೋವಾ ಸಿಎಂಗೆ ಬಿಎಸ್ವೈ ತಿರುಗೇಟು

ಮಹದಾಯಿ ನೀರು ಕೊಡಲ್ಲ ಎಂದ ಗೋವಾ ಸಿಎಂಗೆ ಬಿಎಸ್ವೈ ತಿರುಗೇಟು

Spread the love

ಬೆಂಗಳೂರು,ಜ.31-ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಿಗೆ ಶಾಶ್ವತ ಕುಡಿಯುವ ನೀರು ಪೂರೈಕೆ ಮಾಡುವ ಮಹದಾಯಿ ನದಿನೀರು ಹಂಚಿಕೆಯಲ್ಲಿ ಕರ್ನಾಟಕ ಯಾವುದೇ ಕಾರಣಕ್ಕೂ ಯಾರಿಗೂ ಬಗ್ಗುವುದಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿಕೆಗೆ ತಿರುಗೇಟು ನೀಡಿದ ಅವರು, ಮಹದಾಯಿ ನದಿನೀರಿನಲ್ಲಿ ನ್ಯಾಯಾೀಕರಣದ ತೀರ್ಪಿನಂತೆ ನಮಗೂ ಕೂಡ ನೀರು ಸಿಗಲೇಬೇಕು. ನಾವು ಕೂಡ ಯಾರಿಗೂ ಬಗ್ಗುವುದಿಲ್ಲ, ಜಗ್ಗುವುದೂ ಇಲ್ಲ ಎಂದು ಗುಡುಗಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ನದಿನೀರು ಯೋಜನೆ ಅನುಷ್ಠಾನ ಮಾಡಲು ಯಾವುದೇ ಸಮಸ್ಯೆಯಿಲ್ಲ. ಗೋವಾ ಮುಖ್ಯಮಂತ್ರಿ ತಮ್ಮ ಸ್ವಾರ್ಥಕ್ಕಾಗಿ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಗೆ ಹೆಚ್ಚಿನ ಮಹತ್ವ ಕೊಡುವುದು ಬೇಡ ಎಂದರು.

ನ್ಯಾಯಾಲಯದಲ್ಲಿ ನಮಗೆ ನ್ಯಾಯ ಸಿಗುವ ವಿಶ್ವಾಸವಿದೆ. ನ್ಯಾಯಾೀಕರಣದ ತೀರ್ಪಿನಂತೆ ನೀರು ಹಂಚಿಕೆಯಾಗಲೇಬೇಕು. ಗೋವಾ ಸಿಎಂ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಆಗಾಗಾ ಇಂತಹ ಹೇಳಿಕೆಯನ್ನು ಕೊಡುತ್ತಲೇ ಇರುತ್ತಾರೆ. ಇದಕ್ಕೆ ಹೆಚ್ಚಿನ ಮಹತ್ವ ಬೇಡ ಎಂದು ಹೇಳಿದರು.

ಮಹದಾಯಿ ನದಿ ನೀರು ಯೋಜನೆ ಕುಡಿಯುವ ನೀರಿನ ಯೋಜನೆಯಾಗಿರುವುದರಿಂದ ಇದಕ್ಕೆ ಅಡ್ಡಿಪಡಿಸುವುದು ಸರಿಯಲ್ಲ. ಈಗಾಗಲೇ ನ್ಯಾಯಾೀಕರಣ ಮತ್ತು ನ್ಯಾಯಾಲಯಕ್ಕೆ ಮನವರಿಕೆ ಮಾಡಿದ್ದೇವೆ. ಅಲ್ಲಿನ ರಾಜಕೀಯ ಹಿತಾಸಕ್ತಿಗಾಗಿ ಕೆಲವರು ಇಂತಹ ಗೊಂದಲಗಳನ್ನು ಸೃಷ್ಟಿಸುತ್ತಾರೆ ಎಂದು ಆಕ್ಷೇಪಿಸಿದರು.

ಮಹದಾಯಿ ಯೋಜನೆ ಯಾವ ಕಾರಣಕ್ಕಾಗಿ ಅನುಷ್ಠಾನ ಮಾಡಬೇಕು ಎಂಬುದರ ಬಗ್ಗೆ ಕೇಂದ್ರ ನಾಯಕರಿಗೆ ಮನವರಿಕೆ ಮಾಡಿಕೊಡುತ್ತೇವೆ. ಕೇಂದ್ರ ಸರ್ಕಾರವು ಯೋಜನೆ ಅನುಷ್ಠಾನಕ್ಕೆ ಎಲ್ಲ ರೀತಿಯ ಸಹಕಾರ ಕೊಟ್ಟಿದೆ. ರಾಜಕೀಯ ಹೇಳಿಕೆಗಳಿಗೆ ಮಹತ್ವ ಕೊಡುವ ಅಗತ್ಯವೇ ಇಲ್ಲ ಎಂದರು.

# ತಪ್ಪಾಗಿದ್ದರೆ ತಿದ್ದಿಕೊಳ್ಳುತ್ತೇವೆ:
ನಮ್ಮಿಂದ ಯಾವುದೇ ರೀತಿಯ ತಪ್ಪುಗಳಾಗಿದ್ದರೆ ಅದನ್ನು ಸರಿಪಡಿಸಿಕೊಂಡು ಜನಪರವಾದ ಆಡಳಿತ ನೀಡಲು ಸಿದ್ದರಿದ್ದೇವೆ. ಒಂದು ವೇಳೆ ಪ್ರತಿಪಕ್ಷಗಳು ಟೀಕೆ ಮಾಡಿದರೂ ಅದನ್ನು ಸಕಾರಾತ್ಮಕವಾಗಿ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಹೇಳಿದರು.

ವಿಪಕ್ಷದವರು ಏನೇ ಟೀಕೆಟಿಪ್ಪಣಿ ಮಾಡಿದರೂ ನಾವು ಸ್ವಾಗತಿಸುತ್ತೇವೆ. ನಮ್ಮಿಂದ ತಪ್ಪಾಗಿಲ್ಲ ಎಂದರೆ ವಿಪಕ್ಷದವರು ತಪ್ಪು ಗ್ರಹಿಕೆ ಮಾಡಿಕೊಂಡಿದ್ದರೆ ನಾವೇನು ಮಾಡಲು ಸಾಧ್ಯ ಎಂದು ಪ್ರಶ್ನಿಸಿದರು.ಅವೇಶನದಲ್ಲಿ ಸರ್ಕಾರದ ವೈಫಲ್ಯಗಳನ್ನು ಬಿಚ್ಚಿಡುತ್ತೇವೆ ಎಂಬ ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೂ ತಿರುಗೇಟು ಕೊಟ್ಟ ಯಡಿಯೂರಪ್ಪ, ವಿರೋಧ ಪಕ್ಷದವರಾಗಿ ಅವರ ಕೆಲಸ ಅವರು ಮಾಡುತ್ತಾರೆ.

ಅದನ್ನು ಬಿಟ್ಟರೆ ಅವರಿಗೆ ಮಾಡಲು ಬೇರೇನು ಕೆಲಸವಿದೆ ಎಂದು ವ್ಯಂಗ್ಯವಾಡಿದರು. ನಾಳೆ ಸದನ ಸಲಹಾ ಸಮಿತಿ ಸಭೆಯಿದೆ. ಸಭೆಯಲ್ಲಿ ಎಲ್ಲವನ್ನೂ ಚರ್ಚೆ ಮಾಡಲಿ. ವಿಪಕ್ಷದವರು ಏನೇ ಚರ್ಚೆ ಮಾಡಿದರೂ ಅದಕ್ಕೆ ನಾವು ಸಿದ್ದರಿದ್ದೇವೆ ಎಂದರು.


Spread the love

About Laxminews 24x7

Check Also

ಉತ್ತರ ಪತ್ರಿಕೆಗಳಲ್ಲಿ ‘ಜೈ ಶ್ರೀ ರಾಮ್’ ಎಂದು ಬರೆದಿದ್ದ ವಿದ್ಯಾರ್ಥಿಗಳನ್ನು ಪಾಸ್‌ ಮಾಡಿದ ಇಬ್ಬರು ಶಿಕ್ಷಕರ ಅಮಾನತು

Spread the love ನವದೆಹಲಿ: ಪರೀಕ್ಷಾರ್ಥಿಗಳಿಗೆ ಅವರ ಉತ್ತರಗಳ ಗುಣಮಟ್ಟದ ಆಧಾರದ ಮೇಲೆ ಅಂಕಗಳನ್ನು ನೀಡಲಾಗುತ್ತದೆ. ಆದಾಗ್ಯೂ, ಉತ್ತರ ಪ್ರದೇಶದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ