Breaking News
Home / ರಾಜ್ಯ / ಮುಂಬೈ ಅವಶ್ಯಕತೆ ನಮಗಿಲ್ಲ!: ಸತೀಶ ಜಾರಕಿಹೊಳಿ

ಮುಂಬೈ ಅವಶ್ಯಕತೆ ನಮಗಿಲ್ಲ!: ಸತೀಶ ಜಾರಕಿಹೊಳಿ

Spread the love

ಬೆಳಗಾವಿ: ಮಹದಾಯಿ ನದಿ ನೀರು ಹಂಚಿಕೆ ವಿಚಾರವಾಗಿ ಪ್ರಧಾನಿ ಮೋದಿ ಮಧ್ಯಸ್ಥಿಕೆವಹಿಸಿ ಸಮಸ್ಯೆ ಪರಿಹಾರ ಮಾಡಿಕೊಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.

ಕರ್ನಾಟಕಕ್ಕೆ ಮಹದಾಯಿಯ ಒಂದು ಹನಿ ನೀರು ಕೊಡುವುದಿಲ್ಲ ಎಂದ ಗೋವಾ ಸಿಎಂ ಹೇಳಿಕೆ ವಿಚಾರವಾಗಿ ನಗರದ ತಮ್ಮ ನಿವಾಸದಲ್ಲಿ ಸತೀಶ ಜಾರಕಿಹೊಳಿ ಅವರು ಪ್ರತಿಕ್ರಿಯಿಸಿ, ಈ ಹಿಂದೆ ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಡಿಸೆಂಬರ್ ನಲ್ಲಿ ಸಿಹಿ ಸುದ್ದಿ ನೀಡುವುದಾಗಿ ಘೋಷಣೆ ಮಾಡಿದ್ದರು ಒಂದು ವರ್ಷ ಕಳೆದರು ರೈತರಿಗೆ ಶುಭ ಸುದ್ದಿ ನೀಡಿಲ್ಲ ಕರ್ನಾಟಕ ಮತ್ತು ಗೋವಾ ಎರಡು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇವೆ. ಪ್ರಧಾನಿ ಮೋದಿ ಅವರು ಮಧ್ಯಸ್ಥಿಕೆ ವಹಿಸಿ ಇಬ್ಬರು ಸಿಎಂಗಳ ಜತೆ ಮಾತುಕತೆ ನಡೆಸಿ ಪ್ರಕರಣಕ್ಕೆ ನಾಂದಿ ಹಾಡಬೇಕು ಎಂದು ಒತ್ತಾಯಿಸಿದರು.

 

ಮುಂಬಯಿ ಕರ್ನಾಟಕ ಕ್ಕೆ ಸೇರಲು ಸಾಧ್ಯವಿಲ್ಲ,ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರುವದು ಅಸಾಧ್ಯವಾಗಿದ್ದುಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ ಠಾಕ್ರೆ ಅವರು, ರಾಜಕೀಯ ಉದ್ದೇಶದಿಂದ ಗಡಿ ವಿವಾದ ಕೆಣಕಿದ್ದಾರೆ. ಇದಕ್ಕೆ ಪ್ರಾಮುಖ್ಯತೆ ನೀಡುವ ಅಗತ್ಯವಿಲ್ಲ. ಬೆಳಗಾವಿ ಕರ್ನಾಟಕ ಅವಿಭಾಜ್ಯ ಅಂಗ. ಕರ್ನಾಟಕ ಎಂದೆಂದಿಗೂ ಮರಾಠಿಗರಿಗೆ ಅನ್ಯಾಯ ಮಾಡಿಲ್ಲ. ಅದರಲ್ಲಿಯೂ ವಿಶೇವಾಗಿ ಯಮನಕಮರಡಿ ಕ್ಷೇತ್ರದಲ್ಲಿ ಮರಾಠಿಗರು ಜಾಸ್ತಿ ಇದ್ದು, ಅವರಿಗೆ ಎಲ್ಲ ರೀತಿಯ ಸೌಲಭ್ಯ ಕಲ್ಪಿಸಲಾಗಿದೆ ಎಂದರು.

ಮುಂಬೈ ನಮ್ಮದು ಎಂದ ಸವದಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ಮುಂಬೈ ಪಡೆದು ನಾವೇನು ಮಾಡೋಣ. ಅದರ ಅವಶ್ಯಕತೆ ನಮಗೆ ಇಲ್ಲ. ಬೆಂಗಳೂರು ನಮಗೆ ಸಾಕು. ಸಾಕಷ್ಟು ಹಳ್ಳಿಗಳ ಅಭಿವೃದ್ದಿ ಮಾಡಬೇಕಿದೆ. ಮೊದಲು ಆ ಕೆಲಸ ಮಾಡೋಣ ಎಂದರು.


Spread the love

About Laxminews 24x7

Check Also

ಬಹುಭಾಷಾ ನಟ ಪ್ರಕಾಶ್ ರೈ ಮತ ಚಲಾಯಿಸಿದ್ದು ಯಾರಿಗೆ ಗೊತ್ತಾ?

Spread the love ಲೋಕಸಭೆ ಚುನಾವಣೆ 2024 ರ ಎರಡನೇ ಹಂತದಲ್ಲಿ ಇಂದು ಶುಕ್ರವಾರ (ಏಪ್ರಿಲ್ 26) ಆರಂಭವಾಗಿದೆ. 13 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ