ಚನ್ನಗಿರಿ: ಕೋವಿಡ್ ವ್ಯಾಕ್ಸಿನ್ ಅನ್ನು ಕೆಲವರು ವಿರೋ ಧಿಸುತ್ತಿದ್ದಾರೆ. ತಪ್ಪು ಕಲ್ಪನೆಯಿಂದ ಈ ರೀತಿ ಮಾಡುತ್ತಿದ್ದಾರೆ.ಕೋವಿಡ್ ವ್ಯಾಕ್ಸಿನ್ ಕೊರೊನಾರೋಗಿಗಳಿಗೆ ಸಂಜೀವಿನಿಯಾಗಿದೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದರು.
ತಾಲೂಕಿನ ಹಿರೇಕೊಗಲೂರು ಗ್ರಾಮದಲ್ಲಿ ಪಶು ವೈದ್ಯಕೀಯ ಇಲಾಖೆ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಲು ಒಕ್ಕೂಟ, ಉತ್ಪಾದಕರ ಸಹಕಾರ ಸಂಘ ಮತ್ತು ಗ್ರಾಮ ಪಂಚಾಯಿತಿ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಕರುಗಳ ಪ್ರದರ್ಶನ ಮತ್ತು ಬರಡು ರಾಸು ಚಿಕಿತ್ಸಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಮೂಕ ಪ್ರಾಣಿಗಳ ಸಂರಕ್ಷಣೆ ಮತ್ತು ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರಲಾಗಿದೆ. ದೆಹಲಿಯಲ್ಲ ರೈತರ ಪ್ರತಿಭಟನೆಯಲ್ಲಿ ಕಿಡಿಗೇಡಿಗಳ
ದಾಂಧಲೆಗೆ ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದರು.
ದಾವಣಗೆರೆ ಜಿಲ್ಲೆಯಲ್ಲಿ ಪ್ರತ್ಯೇಕ ಹಾಲು ಉತ್ಪಾದಕ ಘಟಕ ಮತ್ತು ಒಕ್ಕೂಟ ಸ್ಥಾಪಿಸಲು ಒತ್ತು ನೀಡಲಾಗಿದೆ. ಗ್ರಾಮ ಪಂಚಾಯಿತಿಗಳಿಗೆ ಕೇಂದ್ರದಿಂದ ನೆರವಾಗಿ ಅನುದಾನ ನೀಡಲು ಯೋಜನೆ ರೂಪಿಸಲಾಗುತ್ತಿದೆ. ಜಗಳೂರು ತಾಲೂಕಿನ 128 ಗ್ರಾಮಗಳಿಗೆ ಕೇಂದ್ರ, ರಾಜ್ಯ ಸರ್ಕಾರ ಮತ್ತು ಸಾರ್ವಜನಿಕ ಸಹಭಾಗಿತ್ವದಲ್ಲಿ “ಮನೆಗೊಂದು ನಳ’ ಯೋಜನೆ ಜಾರಿಗೆ ತರಲಾಗುತ್ತಿದೆ. ಜಿಲ್ಲೆಯಲ್ಲಿ ಶಾಸಕರಾದ ಮಾಡಾಳ್ ವಿರೂಪಾಕ್ಷಪ್ಪ, ರೇಣುಕಾಚಾರ್ಯ ಮತ್ತು ರಾಮಚಂದ್ರ ರಾಜ್ಯಕ್ಕೆ ಮಾದರಿ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕೆಎಸ್‌ಡಿಎಲ್ ಅಧ್ಯಕ್ಷ, ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮಾತನಾಡಿ, ಸರ್ಕಾರದ ವಿವಿಧ ಯೋಜನೆಗಳ ಅಡಿ ತಾಲೂಕಿನ ರೈತರಿಗೆ 80ಕ್ಕೂ
ಹೆಚ್ಚು ಹಸುಗಳನ್ನು ವಿತರಿಸಲಾಗಿದೆ. ಕೊಗಲೂರಿನಲ್ಲಿ ಹಾಲು ಶೀತಲಿಕರಣ ಘಟಕ ಸ್ಥಾಪನೆಗೆ ಒತ್ತು ನೀಡುವುದಾಗಿ ಹೇಳಿದರು.
ಜಿಪಂ ಉಪಾದ್ಯಕ್ಷೆ ಸಾಕಮ್ಮ ಗಂಗಾಧರ ನಾಯ್ಕ, ತಾಪಂ ಅಧ್ಯಕ್ಷೆ ಕವಿತಾ ಕಲ್ಲೇಶ್, ಚಂದ್ರಮ್ಮ, ವೀಣಾಕುಮಾರಿ, ಜಗದೀಶ್ ಗೌಡ್ರು, ಕೆ.ಆರ್. ಲೋಕೇಶ್, ಶಿವಮೂರ್ತಪ್ಪ, ಸಿದ್ದಪ್ಪ, ಡಾ| ತಿಪ್ಪೇಸ್ವಾಮಿ, ಡಾ| ದೇವೇಂದ್ರಪ್ಪ ಉಪಸ್ಥಿತರಿದ್ದರು.
ಓದಿ : ಕರ್ಮಯೋಗಿ ಸಿದ್ದರಾಮರಿಂದ ಶ್ರಮ ಸಂಸ್ಕೃತಿಗೆ ಶ್ರೀಕಾರ·: ಚನ್ನಬಸಪ್ಪ