Breaking News

ಪ್ರಪಂಚದ ಅತಿ ಎತ್ತರದ ಕಟ್ಟಡ ಬುರ್ಜ್ ಖಲೀಫಾ ಮೇಲೆ ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾದ ಟೈಟಲ್

Spread the love

ಪ್ರಪಂಚದ ಅತಿ ಎತ್ತರದ ಕಟ್ಟಡ ಬುರ್ಜ್ ಖಲೀಫಾ ಮೇಲೆ ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾದ ಟೈಟಲ್ ಲೋಗೋ ಬಿಡುಗಡೆಯಾಗಿದೆ. ಬಣ್ಣದ ಲೋಕಕ್ಕೆ ಕಾಲಿಟ್ಟು 25 ವರ್ಷಗಳನ್ನು ಪೂರೈಸಿರುವ ಕಿಚ್ಚ ಸುದೀಪ್, 25 ವರ್ಷದ ಪಯಣವನ್ನು ವಿಶ್ವದ ಅತೀ ಎತ್ತರದ ಕಟ್ಟಡ ಬುರ್ಜ್ ಖಲೀಫಾ ಮೇಲೆ ನೋಡಿ ಸಂಭ್ರಮಿಸಿದ್ದಾರೆ.

ಸುದೀಪ್ ನಟಿಸಿದ ಚಿತ್ರಗಳ ಝಲಕ್, ಕ್ರಿಕೆಟ್, ಗಾಯನ ಸೇರಿದಂತೆ ಕಿಚ್ಚ ನಡೆದು ಬಂದ ಹಾದಿಯನ್ನು ಟೀಸರ್ ಮೂಲಕ ಬಿತ್ತರಿಸಲಾಯಿತು. ಇದೇ ವೇಳೆ ವಿಕ್ರಾಂತ್ ರೋಣ ಟೀಸರ್ ಸಹ ಪ್ರದರ್ಶನವಾಯಿತು. ವಿಕ್ರಾಂತ್ ರೋಣ ಭಾರತದ ಹಲವು ಭಾಷೆಗಳಲ್ಲಿ ಹಾಗೂ ಜಗತ್ತಿನ ಹಲವು ದೇಶಗಳಲ್ಲಿ ಸಿನಿಮಾ ರಿಲೀಸ್ ಆಗುತ್ತಿದೆ ಎಂದು ಪ್ರಕಟಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಕಿಚ್ಚ ಸುದೀಪ್, ‘ಬುರ್ಜ್ ಖಲೀಫಾ ಮೇಲೆ ಕನ್ನಡದ ಬಾವುಟ ಬಂತು..ಅದು ನಗೆ ಬಹಳ ಹೆಮ್ಮೆಯ ಕ್ಷಣವಾಗಿತ್ತು. ಇಲ್ಲಿ ಎಲ್ಲರ ಮುಖದಲ್ಲಿ ಖುಷಿ ನೋಡಿ ನನಗೂ ಖುಷಿಯಾಗಿದೆ’ ಎಂದು ಹೇಳಿದ್ದಾರೆ.

ಇನ್ನು ಇದೇ ಸಮಯದಲ್ಲಿ ಮಾತನಾಡಿ, ವಿಕ್ರಾಂತ್ ರೋಣ ಆಗಸ್ಟ್ ಅಥವಾ ಸೆಪ್ಟೆಂಬರ್ ನಲ್ಲಿ ರಿಲೀಸ್ ಆಗಲಿದೆ ಎಂದು ಸಿನಿಮಾ ರಿಲೀಸ್ ಬಗ್ಗೆಯೂ ಬಹಿರಂಗ ಪಡಿಸಿದ್ದಾರೆ. ಚಿತ್ರೀಕರಣ ಮುಗಿಸಿರುವ ಸಿನಿಮಾತಂಡ ಹಾಡಿನ ಚಿತ್ರೀಕರಣ ಬಾಕಿ ಇದೆ ಎಂದು ಹೇಳಲಾಗುತ್ತಿದೆ. ಸದ್ಯ 3ಡಿ ಕೆಲಸಗಳು ನಡೆಯುತ್ತಿದೆ ಎನ್ನಲಾಗುತ್ತಿದೆ.

ವಿಕ್ರಾಂತ್ ರೋಣ ಅನೂಪ್ ಭಂಡಾರಿ ಸಾರಥ್ಯದಲ್ಲಿ ಮೂಡಿಬರುತ್ತಿದೆ. ಚಿತ್ರದಲ್ಲಿ ನಿರೂಪ್ ಭಂಡಾರಿ ಸಹ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಜಾಕ್ ಮಂಜು ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.


Spread the love

About Laxminews 24x7

Check Also

ತರುಣ್ ಸುಧೀರ್ ನಿರ್ಮಾಣದ ‘ಏಳುಮಲೆ’ ಸಿನಿಮಾದ ಮೆಲೋಡಿ ಹಾಡು ರಿಲೀಸ್..

Spread the love ತರುಣ್ ಸುಧೀರ್ ನಿರ್ಮಾಣದ ‘ಏಳುಮಲೆ’ ಸಿನಿಮಾದ ಮೆಲೋಡಿ ಹಾಡು ರಿಲೀಸ್.. ರಾಣಾ-ಪ್ರಿಯಾಂಕಾ ಜೋಡಿಯ ಏಳುಮಲೆ ಸಿನಿಮಾದ‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ