ಕುಂದಾಪುರ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯಕ್ಷಗಾನದ ಹಿರಿಯ ಸ್ತ್ರೀವೇಷಧಾರಿ ವಂಡ್ಸೆ ನಾರಾಯಣ ಗಾಣಿಗ ಅವರು ಸೋಮವಾರ ನಿಧನ ಹೊಂದಿದರು.
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿರುವ ಕೊಲ್ಲೂರಿನ ವಂಡ್ಸೆ ಗ್ರಾಮದವರಾದ ನಾರಾಯಣ ಗಾಣಿಗರು, ಸುಮಾರು 28 ವರ್ಷಗಳ ಕಾಲ ಹಲವು ಮೇಳಗಳಲ್ಲಿ ತಿರುಗಾಟ ನಡೆಸಿದ್ದರು. ಮಾರಣಕಟ್ಟೆ, ಮಂದಾರ್ತಿ, ಕೊಲ್ಲೂರು, ಧರ್ಮಸ್ಥಳ, ಪೆರ್ಡೂರು, ಸಾಲಿಗ್ರಾಮ ಮತ್ತು ಇಡಗುಂಜಿ ಮೇಳಗಳಲ್ಲಿ ಇವರು ಕಲಾಕೃಷಿ ನಡೆಸಿದ್ದರು.
ನಾರಾಯಣ ಗಾಣಿಗ ಅವರು ದ್ರೌಪದಿ, ಶಶಿಪ್ರಭೆ, ಚಿತ್ರಾಂಗದೆ, ಮಂಡೋದರಿ, ಮೀನಾಕ್ಷಿ, ತಾರೆ ಮುಂತಾದ ಪಾತ್ರಗಳಲ್ಲಿ ಮಿಂಚಿದ್ದರು. ಇವರು 2008ನೇ ಸಾಲಿನಲ್ಲಿ ಯಕ್ಷಗಾನ ಅಕಾಡೆಮಿ ಪುರಸ್ಕಾರ, 2013ರಲ್ಲಿ ಮಕ್ಕಳ ಮೇಳದ ಉಡುಪ ಪ್ರಶಸ್ತಿ 2014ರಲ್ಲಿ ಯಕ್ಷ ಮಿತ್ರಕೂಟದ ರಂಗಸ್ಥಳ ಪ್ರಶಸ್ತಿ ಮತ್ತು ರಾಜ್ಯೋತ್ಸವ ಪ್ರಶಸ್ತಿಗೆ ಪಾತ್ರರಾಗಿದ್ದರು.
Laxmi News 24×7