Breaking News

ಕೇಂದ್ರ ಸರಕಾರ ಮಂಡಿಸಿರುವ  ಬಜೆಟ್ ವಿಶ್ವಗುರು ಸ್ಥಾನದತ್ತ ಕೊಂಡೊಯ್ಯುವ ಅತ್ಯದ್ಭುತ ಆಯವ್ಯಯವಾಗಿದೆ: ಡಾ.ಸೋನಾಲಿ 

Spread the love

 ಕೇಂದ್ರ ಸರಕಾರದ ಸೋಮವಾರ ಮಂಡಿಸಿರುವ ಮೊದಲ ಡಿಜಿಟಲ್ ಬಜೆಟ್ ಆತ್ಮನಿರ್ಭರ ಮತ್ತು ಆಯುಷ್ಮಾನ್ ಭಾರತ್ ಕೇಂದ್ರೀಕೃತ ಬಜೆಟ್ ಆಗಿದ್ದು, ಭಾರತವನ್ನು ವಿಶ್ವಗುರು ಸ್ಥಾನದತ್ತ ಕೊಂಡೊಯ್ಯುವ ಅತ್ಯದ್ಭುತ ಆಯವ್ಯಯವಾಗಿದೆ ಎಂದು ಲಲಿತಕಲಾ ಅಕಾಡೆಮಿ ಸದಸ್ಯರೂ, ಕರ್ನಾಟರ ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯರೂ ಆಗಿರುವ ಡಾ.ಸೋನಾಲಿ ಸರ್ನೋಬತ್ ಪ್ರತಿಕ್ರಿಯಿಸಿದ್ದಾರೆ.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಕೇಂದ್ರ ಬಜೆಟ್  ದೇಶದ ಆರ್ಥಿಕತೆಗೆ ಶಕ್ತಿ ತುಂಬುವುದಲ್ಲದೆ ಮುಂದಿನ ಮೂರ್ನಾಲ್ಕು ವರ್ಷಗಳಲ್ಲಿ ದೇಶದ ಸದೃಢ ಬೆಳವಣಿಗೆಗೂ ಕಾರಣವಾಗಲಿದೆ ಎಂದು ಅವರು ಹೇಳಿದ್ದಾರೆ.

ರೈತರ ಕಲ್ಯಾಣಕ್ಕಾಗಿ  ಹಲವು ಯೋಜನೆ ಜಾರಿಗೊಳಿಸಲಾಗಿದೆ. ಕನಿಷ್ಠ ಬೆಂಬಲ ಬೆಲೆಯಲ್ಲಿ ಬದಲಾವಣೆ ಮಾಡಲಾಗಿದೆ. ಒಟ್ಟು ಉತ್ಪಾದನಾ ವೆಚ್ಚದ ಕನಿಷ್ಠ 1.5 ಪಟ್ಟು ಬೆಲೆ ಖಾತರಿ ನೀಡಲಾಗಿದೆ. 2022ರ ಹಣಕಾಸು ವರ್ಷದಲ್ಲಿ 16.5 ಲಕ್ಷ ಕೋಟಿ ಕೃಷಿ ಸಾಲ ಗುರಿ ಹೊಂದಲಾಗಿದೆ. ಗ್ರಾಮೀಣ ಮೂಲಸೌಕರ್ಯ ಮತ್ತು ನೀರಾವರಿಗೆ ಹೆಚ್ಚುವರಿ ಹಂಚಿಕೆ ಮಾಡಲಾಗಿದೆ. ಸರ್ವ ರೀತಿಯಿಂದಲೂ ಈ ಬಜೆಟ್ ಭಾರತವನ್ನು ಸಶಕ್ತವಾಗಿಸಲಿದೆ ಎಂದು ಡಾ.ಸೋನಾಲಿ ಹೇಳಿದ್ದಾರೆ.

ಆರ್ಥಿಕತೆಗೆ ಚೈತನ್ಯ ತುಂಬಲು  ಆತ್ಮನಿರ್ಭರ ಪ್ಯಾಕೇಜ್,    ಕೊರೋನಾ ಮಹಾಮಾರಿ  ನಿರ್ಮೂಲನೆಗಾಗಿ 35 ಸಾವಿರ ಕೋಟಿ ರೂ. ಸೇರಿದಂತೆ ಪ್ರತಿಯೊಂದು ಕ್ಷೇತ್ರಗಳಿಗೆ ಆದ್ಯತೆ ನೀಡಲಾಗಿದೆ.  ಗ್ರಾಮೀಣ ಮೂಲಸೌಕರ್ಯಕ್ಕೆ 40 ಸಾವಿರ ಕೋಟಿ ರೂ. ನಿಗದಿಪಡಿಸಲಾಗಿದ್ದು, ಕೃಷಿಕರ ಸಾಲಕ್ಕಾಗಿ 16,500 ಕೋಟಿ ರೂ.ಗಳನ್ನು ತೆಗೆದಿರಿಸಲಾಗಿದೆ.  ಹಿರಿಯ ನಾಗರಿಕರಿಗೆ ತೆರಿಗೆ ವಿನಾಯಿತಿ,  5 ಟ್ರಿಲಿಯನ್ ಆರ್ಥಿಕತೆಯ ಗುರಿ, ರೈತರ ಆದಾಯ ದ್ವಿಗುಣಗೊಳಿಸಲು ಆದ್ಯತೆ ಮೊದಲಾದ ಯೋಜನೆಗಳು ಸರ್ವ ನಾಗರಿಕರಿಗೂ ಪ್ರಯೋಜನ ನೀಡಲಿದೆ ಎಂದು ಅವರು ಹೇಳಿದ್ದಾರೆ.


Spread the love

About Laxminews 24x7

Check Also

ರಾಜ್ಯದಲ್ಲಿ ಹಾವು ಕಡಿತ ಪ್ರಕರಣ​ ಹೆಚ್ಚಳ

Spread the loveಬೆಂಗಳೂರು, ನವೆಂಬರ್​ 13: ರಾಜ್ಯದಲ್ಲಿ ಬೀದಿ ನಾಯಿಗಳ ಹಾವಳಿ ಜೊತೆಗೆ ಹಾವುಗಳ ಕಾಟವೂ ಹೆಚ್ಚಿದೆ. ಅತಿಯಾಗಿ ನಡೆಯುತ್ತಿರುವ ಕಾಂಕ್ರಿಟೀಕರಣದ ಪ್ರಭಾವದಿಂದಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ