Breaking News

ಹಿಮಪಾತದಿಂದ ರಸ್ತೆ ಬಂದ್; ಸೇನಾ ವಾಹನದಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

Spread the love

ನವದೆಹಲಿ: ಆಸ್ಪತ್ರೆಗೆ ತೆರಳುವಾಗಲೇ ಭಾರಿ ಹಿಮಪಾತವಾದ್ದರಿಂದ, ಮಹಿಳೆಯೊಬ್ಬರು ಭಾರತೀಯ ಸೇನೆಯ ಆಂಬ್ಯುಲೆನ್ಸ್‌ ನಲ್ಲಿ ಮಗುವಿಗೆ ಜನ್ಮ ನೀಡಿದ ಘಟನೆ ಜಮ್ಮು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ನಡೆದಿದೆ.

ಕುಪ್ವಾರದ ನರಿಕೂಟ್ ನಲ್ಲಿ ಭಾರಿ ಹಿಮಪಾತವಾಗುತ್ತಿದ್ದರಿಂದ ಆಶಾ ಕಾರ್ಯಕರ್ತೆಯೊಬ್ಬರು ಸೇನಾ ಆಯಂಬುಲೆನ್ಸ್ ಗೆ ಕರೆ ಮಾಡಿ ಗರ್ಭಿಣಿ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸುವಂತೆ ಕೋರಿಕೊಂಡಿದ್ದರು. ಕೂಡಲೇ ಸ್ಥಳಕ್ಕೆ ಧಾವಿಸಿದ ಸೇನಾ ಆಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಹೋಗುವಾಗ ಗರ್ಭಿಣಿ ಮಹಿಳೆಯ ಮಗುವಿಗೆ ಜನ್ಮ ನೀಡಿದ್ದಾರೆ.

ನಂತರ ಮಹಿಳೆ ಮತ್ತು ನವಜಾತ ಶಿಶುವನ್ನು ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿದೆ. ಕರೆ ಬಂದ ಕೂಡಲೇ ಸೈನ್ಯದ ವಾಹನವನ್ನು ವೈದ್ಯಕೀಯ ತಂಡದೊಂದಿಗೆ ನರಿಕೂಟ್‌ಗೆ ಕಳುಹಿಸಿ ಕೊಡಲಾಗಿತ್ತು. ಈಗ ಮಗು ಮತ್ತು ತಾಯಿ ಆರೋಗ್ಯವಾಗಿದ್ದಾರೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ