Breaking News

ಸದನದಲ್ಲಿ ಅಶ್ಲೀಲ ಚಿತ್ರ ವೀಕ್ಷಣೆ ಕುರಿತ ಪರಿಶೀಲನೆಗೆ ಸಮಿತಿ : ಸಭಾಪತಿ ಆದೇಶ

Spread the love

ಬೆಂಗಳೂರು: ವಿಧಾನ ಪರಿಷತ್ತಿನ ಸದಸ್ಯರೊಬ್ಬರು ಸದನದ ಒಳಗೆ ಜ.29ರಂದು ಕಲಾಪ ನಡೆಯುತ್ತಿರುವಾಗ ಅಶ್ಲೀಲ ಚಿತ್ರ ವೀಕ್ಷಿಸಿದ್ದಾರೆಂಬ ಕುರಿತು ಮಾಧ್ಯಮಗಳಲ್ಲಿ ಬಂದಿರುವ ವರದಿ ಬಗ್ಗೆ ತನಿಖೆ ನಡೆಸಲು ವಿಧಾನಪರಿಷತ್‌ ನೀತಿ ನಿರೂಪಣಾ ಸಮಿತಿಗೆ ಒಪ್ಪಿಸಿ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಆದೇಶಿಸಿದ್ದಾರೆ.

ಸೋಮವಾರ ಕಲಾಪ ಆರಂಭವಾಗುತ್ತಿದ್ದಂತೆಯೇ ಪ್ರಕಟಣೆ ಹೊರಡಿಸಿದ ಸಭಾಪತಿಗಳು, 2020- 21ನೇ ಸಾಲಿನ ವಿಧಾನಪರಿಷತ್ತಿನ ನೀತಿ ನಿರೂಪಣಾ ಸಮಿತಿಗೆ ಬಿ.ಕೆ. ಹರಿಪ್ರಸಾದ್‌, ಡಾ.ತೇಜಸ್ವಿನಿಗೌಡ, ಕೆ.ಟಿ. ಶ್ರೀಕಂಠೇಗೌಡ, ಎಸ್‌.ವಿ. ಸಂಕನೂರ, ಎನ್‌. ಅಪ್ಪಾಜಿಗೌಡ, ಪಿ.ಆರ್‌.ರಮೇಶ್‌ ಸದಸ್ಯರಾಗಿದ್ದು, ಉಪ ಸಭಾಪತಿ ಎಂ.ಕೆ. ಪ್ರಾಣೇಶ್‌ ಅವರು ಸಮಿತಿ ಅಧ್ಯಕ್ಷರಾಗಿರುತ್ತಾರೆ ಎಂದು ತಿಳಿಸಿದರು.

ಮಾಧ್ಯಮ ವರದಿ ಆಧರಿಸಿ ತನಿಖೆಯನ್ನು ನೀತಿ ನಿರೂಪಣಾ ಸಮಿತಿಗೆ ಒಪ್ಪಿಸಲಾಗಿದೆ. ಈ ವಿಷಯವಾಗಿ ವಿಚಾರಣೆ ಇಲ್ಲವೆ, ತನಿಖೆ ನಡೆದಾಗ ಮಾಧ್ಯಮಗಳು ಕೂಡ ಸಹಕರಿಸಬೇಕು ಎಂದು ಸಭಾಪತಿಗಳು ಸೂಚಿಸಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ