Breaking News

ಬಿಜೆಪಿ ಜತೆ ಕೈ ಜೋಡಿಸಿ ಖೆಡ್ಡಾ ತೋಡಿಕೊಂಡ ಜೆಡಿಎಸ್‌: ಜಮೀರ್‌

Spread the love

ಕೆರೂರ: ಗೋಹತ್ಯೆ ಜಾರಿಗೊಳಿಸಲು ಕೋಮುವಾದಿ ಬಿಜೆಪಿ ಜತೆ ಕೈಜೋಡಿಸಿದ ಜೆಡಿಎಸ್‌ ತಾನಾಗೇ ಖೆಡ್ಡಾ ತೋಡಿಕೊಂಡಿದ್ದು, ರಾಜ್ಯದಲ್ಲಿ ಆ ಪಕ್ಷಕ್ಕೆ ಸತ್ವವೇ ಇಲ್ಲದಂತಾಗಿ ಹೋಗಿದೆ ಎಂದು ಕಾಂಗ್ರೆಸ್‌ ಶಾಸಕ ಜಮೀರ ಅಹ್ಮದ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತ್ಯತೀತ ಜನತಾದಳ ಎಂದು ಹೇಳಿಕೊಳ್ಳುವ ಜೆಡಿಎಸ್‌ನವರು ಕೋಮುವಾದಿ ಬಿಜೆಪಿ ಜತೆ ಸೇರಿ ಗೋಹತ್ಯೆ ನಿಷೇಧಕ್ಕೆ ಬೆಂಬಲ ಸೂಚಿಸಿದ ಮೇಲೆ ಅದು ಹೇಗೆ ಜಾತ್ಯತೀತ ಪಕ್ಷವಾಗುತ್ತದೆ.

ಬಿಜೆಪಿಗೆ ಬೆಂಬಲ ಸೂಚಿಸಿರುವ ಜೆಡಿಎಸ್‌ ಮೊದಲು ಸೆಕ್ಯುಲರ್‌ ವಾದವನ್ನು ಪಕ್ಷದಿಂದ ಕಿತ್ತೂಗೆಯಬೇಕು. ಉತ್ತರ ಕರ್ನಾಟಕ ಅಭಿವೃದ್ಧಿ ಮಾಡುತ್ತೇನೆ ಎನ್ನುವ ಕುಮಾರಸ್ವಾಮಿ ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿ ಒಂದೂವರೆ ವರ್ಷ ತಮ್ಮ ಆಡಳಿತದಲ್ಲಿ ತಾಜ್‌ ವೆಸ್ಟೆಂಡ್‌ ಹೋಟೆಲ್‌ನಲ್ಲಿ ಕುಳಿತು ಉತ್ತರ ಕರ್ನಾಟಕ ಎಷ್ಟು ಅಭಿವೃದ್ಧಿ ಮಾಡಿದ್ದಾರೆ ಎಂಬುದನ್ನು ರಾಜ್ಯದ ಜನತೆ ಕಣ್ಣಾರೆ ನೋಡಿದ್ದಾರೆ ಎಂದು ಕುಟುಕಿದರು.


Spread the love

About Laxminews 24x7

Check Also

ಒಂದೂವರೆ ವರ್ಷದಲ್ಲಿ ರಾಯಚೂರು ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ: ಎಸ್.ಜಿ.ನಂಜಯ್ಯನಮಠ

Spread the loveರಾಯಚೂರು: ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಕಾಮಗಾರಿ ನಿಧಾನಗತಿಯಲ್ಲಿ ಸಾಗಿದ್ದು, ಒಂದೂವರೆ ವರ್ಷದಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಕರ್ನಾಟಕ ರಾಜ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ