ನವದೆಹಲಿ: ಕಳೆದ ನವೆಂಬರ್ ನಿಂದ ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ಗಳ ವಿರುದ್ಧ ರೈತರು ಪ್ರತಿಭಟನೆ ಮಾಡುತ್ತಿರುವ ಪ್ರತಿಭಟನಾ ಸ್ಥಳಗಳಲ್ಲಿ ಒಂದಾದ ದೆಹಲಿ ಮತ್ತು ಹರಿಯಾಣ ನಡುವಿನ ಸಿಂಘು ಗಡಿಗೆ ಶಿವಸೇನೆ ಸಂಸದ ಸಂಜಯ್ ರಾವುತ್ ಮಂಗಳವಾರ ಭೇಟಿ ನೀಡಲಿದ್ದಾರೆ.
60 ದಿನಗಳಿಂದ ರೈತರ ಪ್ರತಿಭಟನೆ ಕೇಂದ್ರವಾಗಿರುವ ಪ್ರತಿಭಟನಾ ಸ್ಥಳಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಹಾಗೂ ಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ಸಲಹೆ ಮೇರೆಗೆ ಭೇಟಿ ನೀಡಲು ರಾವತ್ ನಿರ್ಧರಿಸಿದ್ದಾರೆ.
ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಪಂಜಾಬ್ ಮತ್ತು ಹರಿಯಾಣಾ ದಿಂದ ಹಲವು ರೈತರು ಕಳೆದ ಎರಡು ತಿಂಗಳಿನಿಂದ ಸಿಂಗು ಗಡಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
Laxmi News 24×7