Breaking News

ಎಟಿಎಂ ನಲ್ಲಿ ಜ್ಯೋತಿ ಉದಯ್ ಮೇಲೆ ಹಲ್ಲೆ ಪ್ರಕರಣಅಪರಾಧಿಗೆ 12 ವರ್ಷ ಜೈಲು ಶಿಕ್ಷೆ ಪ್ರಕಟಿಸಿದ ಕೋರ್ಟ್

Spread the love

ಬೆಂಗಳೂರು: ಕಾರ್ಪೊರೇಷನ್ ಬ್ಯಾಂಕ್ ಎಟಿಎಂ ನಲ್ಲಿ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ಅಪರಾಧಿ ಮಧುಕರ್ ರೆಡ್ಡಿಗೆ ಬೆಂಗಳೂರಿನ 65ನೇ ಸಿಸಿಹೆಚ್ ನ್ಯಾಯಾಲಯ 12 ವರ್ಷಗಳ ಜೈಲು ಶಿಕ್ಷೆ ನೀಡಿ ತೀರ್ಪು ಪ್ರಕಟಿಸಿದೆ.

2013ರ ನವೆಂಬರ್ 19ರಂದು ಬೆಳಿಗ್ಗೆ 7:10ಕ್ಕೆ ಬ್ಯಾಂಕ್ ಮ್ಯಾನೇಜರ್ ಆಗಿದ್ದ ಜ್ಯೋತಿ ಉದಯ್, ಹಣ ಡ್ರಾ ಮಾಡಲೆಂದು ಬೆಂಗಳೂರಿನ ಕಾರ್ಪೊರೇಷನ್ ಸರ್ಕಲ್ ನಲ್ಲಿರುವ ಎಟಿಎಂಗೆ ಹೋಗಿದ್ದರು. ಈ ವೇಳೆ ಎಟಿಎಂ ನೊಳಗೆ ನುಗ್ಗಿದ್ದ ಮಧುಕರ್ ರೆಡ್ದಿ ಶಟರ್ ಕ್ಲೋಸ್ ಮಾಡಿ ಮಚ್ಚಿನಿಂದ ಹಲ್ಲೆ ನಡೆಸಿ ಹಣ ಕಸಿದುಕೊಂಡು ಪರಾರಿಯಾಗಿದ್ದ. 2017ರಲ್ಲಿ ಆರೋಪಿಯನ್ನು ಮದನಪಲ್ಲಿ ಪೊಲೀಸರು ಬಂಧಿಸಿದ್ದರು.

ಬರೋಬ್ಬರಿ 4 ವರ್ಷಗಳ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯ ಇದೀಗ ಅಪರಾಧಿಗೆ ಶಿಕ್ಷೆ ವಿಧಿಸಿದ್ದು, ದರೋಡೆ ಆರೋಪದಡಿ 10 ವರ್ಷ ಜೈಲು ಶಿಕ್ಷೆ ಹಾಗೂ ಸಾಕ್ಷ್ಯ ನಾಶ ಮಾಡಿದ್ದಕ್ಕೆ 2 ವರ್ಷ ಶಿಕ್ಷೆ ಒಟ್ಟು 12 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.


Spread the love

About Laxminews 24x7

Check Also

ಕುಪ್ಪಟಗಿರಿ ಕ್ರಾಸ್ ಬಳಿ ಹೊಸ ಟ್ರಾನ್ಸ್’ಫಾರ್ಮರ್ ಲೋಕಾರ್ಪಣೆಗೊಳಿಸಿದ ಮಾಜಿ ಶಾಸಕ ಅರವಿಂದ ಪಾಟೀಲ್

Spread the love ಕುಪ್ಪಟಗಿರಿ ಕ್ರಾಸ್ ಬಳಿ ಹೊಸ ಟ್ರಾನ್ಸ್’ಫಾರ್ಮರ್ ಲೋಕಾರ್ಪಣೆಗೊಳಿಸಿದ ಮಾಜಿ ಶಾಸಕ ಅರವಿಂದ ಪಾಟೀಲ್ ಖಾನಾಪೂರ ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ