Home / Uncategorized / ಲಾವಿದ ಹುಲಿವಾನ್ ಗಂಗಾಧರಯ್ಯ (70) ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ಲಾವಿದ ಹುಲಿವಾನ್ ಗಂಗಾಧರಯ್ಯ (70) ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

Spread the love

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಹುಲಿವಾನ್ ಗಂಗಾಧರಯ್ಯ (70) ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ನಿನ್ನೆ ರಾತ್ರಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕೊರೊನಾ ಕಾರಣದಿಂದ ಸಿನಿರಂಗದ ಕಲಾವಿದರು, ತಂತ್ರಜ್ಞಾನರು, ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದರ ನಡುವೆಯೇ ಹಿರಿಯ ಪೋಷಕ ನಟ ಹುಲಿವಾನ್ ಗಂಗಾಧರಯ್ಯ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಇವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ನಿನ್ನೆ ರಾತ್ರಿ 11 ಗಂಟೆ ವೇಳೆಗೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದಿದ್ದಾರೆ.

118ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಹಾಗೂ 1500ಕ್ಕೂ ಹೆಚ್ಚು ನಾಟಕಗಳಲ್ಲಿ ಹುಲಿವಾನ್ ಗಂಗಾಧರಯ್ಯ ಅವರು ನಟಿಸಿದ್ದರು. ಇತ್ತೀಚಿನವರೆಗೂ ಕೂಡ ಹಲವು ಧಾರಾವಾಹಿಗಳಲ್ಲಿ ನಟಿಸಿದ್ದರು. ಚಿತ್ರೀಕರಣದ ಸಂದರ್ಭದಲ್ಲಿ ಇವರಿಗೆ ಜ್ವರ ಕಾಣಿಸಿಕೊಂಡಿತ್ತು ಎನ್ನಲಾಗಿದ್ದು, ಆ ಬಳಿಕ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು.

ಶಬ್ದವೇದಿ, ಕುರಿಗಳು ಸರ್ ಕುರಿಗಳು, ನೀರ್ ದೋಸೆ, ಅಪ್ಪು, ಕ್ವಾಟ್ಲೆ ಸತೀಶ, ಕರ್ವ, ಪಾಪಿಗಳ ಲೋಕದಲ್ಲಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟ ಹುಲಿವಾನ್ ಗಂಗಾಧರಯ್ಯ ನಟಿಸಿದ್ದರು.


Spread the love

About Laxminews 24x7

Check Also

ಮಹಿಳೆ ಮೇಲೆ ಹಲ್ಲೆ ಪ್ರಕರಣ ; ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಸಿಹಿ ತಿನ್ನಿಸಿ ಸ್ವಾಗತ

Spread the loveಬೆಳಗಾವಿ : ಕಳೆದ ಡಿಸೆಂಬರ್ ನಲ್ಲಿ ಬೆಳಗಾವಿ ಹೊರವಲಯದ ಹೊಸ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ