Breaking News

ಬೆಳಗಾವಿಯಲ್ಲಿ ಸೈನಿಕ ಶಾಲೆ‌ ಪ್ರಾರಂಭಿಸಲು ಸಚಿವ ರಮೇಶ್ ಜಾರಕಿಹೊಳಿ‌ ಒತ್ತಾಯ

Spread the love

ಬೆಳಗಾವಿಯಲ್ಲಿ ಸೈನಿಕ ಶಾಲೆ‌ ಪ್ರಾರಂಭಿಸಲು ಸಚಿವ ರಮೇಶ್ ಜಾರಕಿಹೊಳಿ‌ ಒತ್ತಾಯ

ಕೇಂದ್ರ ರಕ್ಷಣಾ ಸಚಿವ ಮತ್ತು ಭಾರತೀಯ ಜನತಾ ಪಾರ್ಟಿಯ ಮಾಜಿ ರಾಷ್ಟ್ರೀಯ ಅಧ್ಯಕ್ಷ ಶ್ರೀ ರಾಜನಾಥ ಸಿಂಗ್ ಅವರನ್ನು ರಾಜ್ಯದ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ‌ ಅವರು ಭೇಟಿ ಮಾಡಿ ಚರ್ಚೆ ನಡೆಸಿದರು.

ನಿನ್ನೆಯ ಕೇಂದ್ರ ಬಜೆಟ್ ನಲ್ಲಿ ಘೋಷಿಸಿದಂತೆ ದೇಶದಾದ್ಯಂತ ಸೈನಿಕ ಶಾಲೆಗಳನ್ನು ಪ್ರಾರಂಭಿಸುವ ಪ್ರಸ್ತಾವನೆಗೆ ಹರ್ಷ ವ್ಯಕ್ತಪಡಿಸಿದ ಸಚಿವ ರಮೇಶ್ ಜಾರಕಿಹೊಳಿ‌, ಕಿತ್ತೂರು ರಾಣಿ ಚೆನ್ನಮ್ಮ ಅವರ ಹೆಸರಿನಲ್ಲಿ ಹೆಣ್ಣು ಮಕ್ಕಳಿಗೆ ಮತ್ತು ಸಂಗೊಳ್ಳಿ ರಾಯಣ್ಣ ಹೆಸರಿನಲ್ಲಿ ಗಂಡು ಮಕ್ಕಳಿಗೆ ಬೆಳಗಾವಿ ಭಾಗದಲ್ಲಿ ಆದ್ಯತೆಯ ಮೇರೆಗೆ ಸೈನಿಕ ಶಾಲೆ ಪ್ರಾರಂಭಿಸಬೇಕೆಂದು ಕೇಂದ್ರ ರಕ್ಷಣಾ ಸಚಿವರಿಗೆ ಮನವಿ‌ ಮಾಡಿದರು. ಈ ಕುರಿತು ಸನ್ಮಾನ್ಯ ಪ್ರಧಾನಮಂತ್ರಿಗಳಿಗೂ ಪತ್ರ ಬರೆದು ಮನವಿ ಸಲ್ಲಿಸಲಾಗುವುದು ಎಂದು ಸಚಿವ ರಮೇಶ್ ಜಾರಕಿಹೊಳಿ‌ ಹೇಳಿದರು.


Spread the love

About Laxminews 24x7

Check Also

ಜನ್ಮದಿನ ಕಾರ್ಯಕ್ರಮದ ಸಿದ್ಧತೆ ಪರಿಶೀಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಚನ್ನರಾಜ, ಮೃಣಾಲ್

Spread the loveಬೆಳಗಾವಿ : ಶನಿವಾರ ಬೆನಕನಹಳ್ಳಿಯ ಗಾರ್ಡನ್ ಕೋರ್ಟ್ ಮುಂಬಾಗದಲ್ಲಿ ಹಿರಿಯ ನಾಗರಿಕರೊಂದಿಗೆ ತಮ್ಮ ಜನ್ಮದಿನ ಆಚರಿಸಿಕೊಳ್ಳುತ್ತಿರುವ ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ