Breaking News

ಫೆ. 28ಕ್ಕೆ F.D.A. ಪರೀಕ್ಷೆ…

Spread the love

ಬೆಂಗಳೂರು: ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಮುಂದೂಡಲಾಗಿದ್ದ ಪ್ರಥಮ ದರ್ಜೆ ಸಹಾಯಕ (ಎಫ್‍ಡಿಎ) ಹುದ್ದೆಯ ಪರೀಕ್ಷೆಯನ್ನು ಫೆ. 28ಕ್ಕೆ ನಡೆಸಲು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ತೀರ್ಮಾನಿಸಿದೆ.

ಕೆಪಿಎಸ್‍ಸಿ ಕಚೇರಿಯಿಂದಲೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಕಾರಣ ಜ. 24ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಮುಂದೂಡಲಾಗಿತ್ತು.

ಪರೀಕ್ಷೆಯ ಹಿಂದಿನ ದಿನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಮಾಹಿತಿ ಸಿಸಿಬಿ ಪೊಲೀಸರಿಗೆ ಸಿಕ್ಕಿತ್ತು. ಹೀಗಾಗಿ, ಪರೀಕ್ಷೆಯನ್ನು ದಿಢೀರ್ ಮುಂದೂಡಲಾಗಿತ್ತು. 

ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಕೆಪಿಎಸ್‌ಸಿ ಪರೀಕ್ಷಾ ನಿಯಂತ್ರಕರ ವಿಭಾಗದ ಸ್ಟೆನೋಗ್ರಾಫರ್‌ ಸೇರಿ ಮೂವರನ್ನು ಈಗಾಗಲೇ ಸಿಸಿಬಿ ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಯುತ್ತಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ