Breaking News

ಲೋಹದ ಹಕ್ಕಿಗಳ ಕಲರವಕ್ಕೆ ಕ್ಷಣಗಣನೆ

Spread the love

ಬೆಂಗಳೂರು,ಫೆ.3- ಕೋವಿಡ್ ಭೀತಿಯಲ್ಲೇ ಆರಂಭಗೊಳ್ಳುತ್ತಿರುವ ಅಂತಾರಾಷ್ಟ್ರೀಯ ಏರೋ ಇಂಡಿಯಾ ವೈಮಾನಿಕ ಪ್ರದರ್ಶನಕ್ಕೆ ಯಲಹಂಕ ವಾಯುನೆಲೆಯಲ್ಲಿ ಈಗಾಗಲೇ ಸಕಲ ಸಿದ್ದತೆಗಳು ಪೂರ್ಣಗೊಂಡಿವೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಏರೋ ಇಂಡಿಯಾಗೆ ಅಧಿಕೃತ ಚಾಲನೆ ನೀಡಲಿದ್ದು, ಈ ಬಾರಿ ಹಲವು ಬದಲಾವಣೆಗಳನ್ನು ಮಾಡಲಾಗಿದೆ. ಸುಮಾರು 600ಕ್ಕೂ ಹೆಚ್ಚು ಪ್ರದರ್ಶಕರಿದ್ದು, ಇದರಲ್ಲಿ 78 ವಿದೇಶಿ ಕಂಪನಿಗಳಿವೆ. ದೇಶದ ರಕ್ಷಣಾ ಸಂಸ್ಥೆಗಳಾದ ಡಿಆರ್‍ಡಿಒ, ಎಲ್‍ಆರ್‍ಡಿಇ ಇಸ್ರೋ, ಎನ್‍ಎಎಲ್, ಎಚ್‍ಎಎಲ್, ಬಿಎಚ್‍ಇಎಲ್, ಬಿಇಎಲ್ ಸೇರಿದಂತೆ ಹಲವು ಸಂಸ್ಥೆಗಳು ಜಾಗತಿಕ ಮಾರುಕಟ್ಟೆಗೆ ತಮ್ಮ ಉತ್ಪನ್ನಗಳನ್ನು ಪ್ರದರ್ಶಿಸಲಿದೆ.

ಈಗಾಗಲೇ ಭಾರತೀಯ ವಾಯುಪಡೆಗೆ ತೇಜಸ್ ಸೇರ್ಪಡೆಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ತೇಜಸ್‍ನ 2ನೇ ಆವೃತ್ತಿಗಾಗಿ ಕಾರ್ಯ ಯೋಜನೆಯೂ ಕೂಡ ಶುರುವಾಗಿದೆ. ಲಘು ಯುದ್ಧ ವಿಮಾನವಾದ ತೇಜಸ್-1ಎ ಈಗಾಗಲೇ ಹಲವು ಪರೀಕ್ಷೆಗಳನ್ನು ಪೂರ್ಣಗೊಳಿಸಿ ಕಳೆದೆರಡು ಬಾರಿ ಬೆಂಗಳೂರಿನಲ್ಲಿ ಯಲಹಂಕ ವಾಯು ನೆಲೆಯಲ್ಲಿ ನಡೆದ ಏರೋ ಇಂಡಿಯಾದಲ್ಲಿ ತನ್ನ ಸಾಮಥ್ರ್ಯ ಪ್ರದರ್ಶಿಸಿತ್ತು.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ