Home / Uncategorized / ಜನವರಿ 26 ಹಿಂಸಾಚಾರ ಕೇಸ್: ಪ್ರಮುಖ ಆರೋಪಿ ದೀಪ್ ಮಾಹಿತಿ ಕೊಟ್ರೆ 1 ಲಕ್ಷ ಬಹುಮಾನ

ಜನವರಿ 26 ಹಿಂಸಾಚಾರ ಕೇಸ್: ಪ್ರಮುಖ ಆರೋಪಿ ದೀಪ್ ಮಾಹಿತಿ ಕೊಟ್ರೆ 1 ಲಕ್ಷ ಬಹುಮಾನ

Spread the love

ನವದೆಹಲಿ: ಗಣರಾಜ್ಯೋತ್ಸವ(ಜ.26) ದಿನಾಚರಣೆಯಂದು ರೈತರ ಟ್ರ್ಯಾಕ್ಟರ್ ರಾಲಿ ವೇಳೆ ಸಂಭವಿಸಿದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದೀಪ್ ಸಿಧು ಸೇರಿದಂತೆ ಪ್ರಮುಖ ಆರೋಪಿಗಳ ಕುರಿತು ಮಾಹಿತಿ ನೀಡಿದವರಿಗೆ ಒಂದು ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ದೆಹಲಿ ಪೊಲೀಸರು ಬುಧವಾರ (ಫೆ.3, 2021) ಘೋಷಿಸಿದ್ದಾರೆ.

ವರದಿಗಳ ಪ್ರಕಾರ, ಪ್ರಮುಖ ಆರೋಪಿಗಳಾದ ನಟ ದೀಪ್ ಸಿಧು, ಜುಗ್ ರಾಜ್ ಸಿಂಗ್, ಗುರ್ಜೋತ್ ಸಿಂಗ್ ಮತ್ತು ಗುರ್ಜಂತ್ ಸಿಂಗ್ ಕುರಿತು ಮಾಹಿತಿ ನೀಡಿದವರಿಗೆ ತಲಾ ಒಂದು ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ತಿಳಿಸಿದೆ.

ಜನವರಿ 26ರ ಹಿಂಸಾಚಾರದಲ್ಲಿ ಶಾಮೀಲಾದ ಜಜ್ಬೀರ್ ಸಿಂಗ್, ಬೂಟಾ ಸಿಂಗ್, ಸುಖ್ ದೇವ್ ಸಿಂಗ್ ಮತ್ತು ಇಕ್ಬಾಲ್ ಸಿಂಗ್ ಕುರಿತು ಮಾಹಿತಿ ನೀಡಿದವರಿಗೆ ತಲಾ 50 ಸಾವಿರ ರೂಪಾಯಿ ನೀಡುವುದಾಗಿ ದೆಹಲಿ ಪೊಲೀಸರು ಘೋಷಿಸಿದ್ದಾರೆ.

ಜನವರಿ 26ರ ಗಣರಾಜ್ಯೋತ್ಸವದಂದು ನಡೆದ ಹಿಂಸಾಚಾರ ಮತ್ತು ಕೆಂಪುಕೋಟೆಯಲ್ಲಿ ಧಾರ್ಮಿಕ ಬಾವುಟ(ನಿಶಾನ್ ಸಾಹೀಬ್) ಹಾರಿಸಿದ ಪ್ರಕರಣದಲ್ಲಿ ಇವರೆಲ್ಲ ಶಾಮೀಲಾಗಿದ್ದು, ಇವರ ಹೆಸರನ್ನು ಎಫ್ ಐಆರ್ ನಲ್ಲಿ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ರೈತರ ಟ್ರ್ಯಾಕ್ಟರ್ ರಾಲಿ ವೇಳೆ ನಡೆದ ಹಿಂಸಾಚಾರ ಮತ್ತು ಧಾರ್ಮಿಕ ಬಾವುಟ ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದು, ಈವರೆಗೂ ಗುರುತಿಸಿರುವ 12 ಮಂದಿ ಗಲಭೆಕೋರರ ವಿರುದ್ಧ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ವರದಿ ಹೇಳಿದೆ.


Spread the love

About Laxminews 24x7

Check Also

ಮತದಾನಕ್ಕೆ ಮೂರೇ ದಿನ ಬಾಕಿ: ಬೆಂಗಳೂರಿನಲ್ಲಿ ನಾಳೆ ಸಂಜೆಯಿಂದ ನಿಷೇಧಾಜ್ಞೆ

Spread the loveಲೋಕಸಭಾ ಚುನಾವಣೆ ಮತದಾನಕ್ಕೆ ಮೂರೇ ದಿನ ಬಾಕಿ: ಬೆಂಗಳೂರಿನಲ್ಲಿ ನಾಳೆ ಸಂಜೆಯಿಂದ ನಿಷೇಧಾಜ್ಞೆ ಜಾರಿ ಬೆಂಗಳೂರು: ಲೋಕಸಭಾ ಚುನಾವಣೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ