Breaking News

ಕುಡಿಯಲು ನೀರು ತರಲು ಹೋಗಿದ್ದ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಸವಾರನ ಮೇಲೆ ಬಸ್ ಹರಿದು ಯುವಕ ಸ್ಥಳದಲ್ಲೇ ಮೃತ

Spread the love

ಕುಡಿಯಲು ನೀರು ತರಲು ಹೋಗಿದ್ದ ಸಂದರ್ಭದಲ್ಲಿ ಕಾರೊಂದನ್ನು ಓವರ್ ಟೇಕ್ ಮಾಡಲು ಹೋದಾಗ ಬೈಕ್ ಹಿಂಬದಿ ಕೂತಿದ್ದ ಸವಾರನೊಬ್ಬ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಸವಾರನ ಮೇಲೆ ಬಸ್ ಹರಿದು ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ಹುಬ್ಬಳ್ಳಿಯ KEB ಗ್ರಿಡ್ ಬಳಿ ನಡೆದಿದೆ.

ಮೃತಪಟ್ಟ ಯುವಕ ಕೆಲವು ದಿನಗಳ ಹಿಂದೆಯಷ್ಟೇ ಉತ್ತರ ಪ್ರದೇಶದಿಂದ ಕೆಲಸಕ್ಕೆಂದು ಹುಬ್ಬಳ್ಳಿಗೆ ಬಂದಿದ್ದ ಎಂದು ತಿಳಿದು ಬಂದಿದ್ದು,ನೀರು ತರಲು ಹೋದಾಗ ಈ ಅವಘಡ ಸಂಭವಿಸಿದೆ .

ಅಪಘಾತ ಆಗುತ್ತಿದ್ದ ಹಾಗೆ ಸ್ಥಳದಲ್ಲಿ ಟ್ರಾಫಿಕ್ ಜಾಮ್ ಆಗಿತ್ತು,ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ದಕ್ಷಿಣ ಸಂಚಾರಿ ಠಾಣೆಯ ಪೊಲೀಸರು ಶವವನ್ನು ಹುಬ್ಬಳ್ಳಿಯ ಕೀಮ್ಸ್ ಶವಾಗಾರಕ್ಕೆ ರವಾನಿಸಿದ್ದಾರೆ.

ಎರಡು ವಾಹನಗಳನ್ನು ಹುಬ್ಬಳ್ಳಿಯ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಗೆ ತೆಗೆದುಕೊಂಡು ಹೋಗಿದ್ದು ಪ್ರಕರಣ ದಾಖಲಾಗಿದೆ


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ