Breaking News
Home / ರಾಜ್ಯ / ಸರ್ಕಾರವು ಗ್ರಾಮೀಣಾಭಿವೃದ್ಧಿ ಯೋಜನೆಗಳಿಗೆ ಮೀಸಲಿಟ್ಟ ಹಣವನ್ನು ಸಂಪೂರ್ಣವಾಗಿ ಬಳಸಿಕೊಂಡು ಗ್ರಾಮೀಣ ಅಭಿವೃದ್ಧಿ ಮಾಡಲಾಗುತ್ತಿದೆ: ಅಣ್ಣಾ ಸಾಹೇಬ ಜೊಲ್ಲೆ

ಸರ್ಕಾರವು ಗ್ರಾಮೀಣಾಭಿವೃದ್ಧಿ ಯೋಜನೆಗಳಿಗೆ ಮೀಸಲಿಟ್ಟ ಹಣವನ್ನು ಸಂಪೂರ್ಣವಾಗಿ ಬಳಸಿಕೊಂಡು ಗ್ರಾಮೀಣ ಅಭಿವೃದ್ಧಿ ಮಾಡಲಾಗುತ್ತಿದೆ: ಅಣ್ಣಾ ಸಾಹೇಬ ಜೊಲ್ಲೆ

Spread the love

ನವದೆಹಲಿ – ಸರ್ಕಾರವು ಗ್ರಾಮೀಣಾಭಿವೃದ್ಧಿ ಯೋಜನೆಗಳಿಗೆ ಮೀಸಲಿಟ್ಟ ಹಣವನ್ನು ಸಂಪೂರ್ಣವಾಗಿ ಬಳಸಿಕೊಂಡು ಗ್ರಾಮೀಣ ಅಭಿವೃದ್ಧಿ ಮಾಡಲಾಗುತ್ತಿದೆ ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ನರೇಂದ್ರ ಸಿಂಗ್ ತೋಮರ್ ತಿಳಿಸಿದ್ದಾರೆ.

ಸಂಸಂದ ಅಣ್ಣಾ ಸಾಹೇಬ ಜೊಲ್ಲೆ ಲೋಕಸಭೆಯಲ್ಲಿ ಕೇಳಿದ ಪ್ರಶ್ನೆಗೆ ಅವರು ಲಿಖಿತ ಉತ್ತರ ನೀಡಿದ್ದಾರೆ.
ಗ್ರಾಮಗಳಲ್ಲಿ ಉದ್ಯೋಗ ಅಭಿವೃದ್ಧಿ, ಜೀವನೋಪಾಯದ ಅವಕಾಶಗಳನ್ನು ಬಲಪಡಿಸುವುದು, ಸ್ವಯಂ ಉದ್ಯೋಗವನ್ನು ಉತ್ತೇಜಿಸುವುದು, ಗ್ರಾಮೀಣ ಯುವಕರ ಕೌಶಲ್ಯ, ಸಾಮಾಜಿಕ ನೆರವು, ಮೂಲ ಸೌಕರ್ಯಗಳನ್ನು ಅಭಿವೃದ್ಧಿ ಮಾಡುವುದು, ವಸತಿ ಸೌಲಭ್ಯಗಳ ಮೂಲಕ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಗ್ರಾಮೀಣಾಭಿವೃದ್ಧಿ ಸಚಿವಾಲಯವು ಪ್ರಮುಖ ಪಾತ್ರ ವಹಿಸುತ್ತಿದೆ.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಎಂಜಿಎನ್‌ಆರ್‌ಇಜಿಎಸ್), ದೀನ್‌ದಯಾಳ್ ಅತ್ಯೋದಯ ಯೋಜನೆ- ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ (ಡೇ-ಎನ್‌ಆರ್‌ಎಲ್‌ಎಂ), ದೀನ್ ದಯಾಳ್ ಉಪಾಧ್ಯಾಯ-ಗ್ರಾಮೀಣ ಕೌಶಲ್ಯ ಯೋಜನೆ (ಡಿಡಿಯು-ಜಿಕೆವೈ), ಪ್ರಧಾನ ಮಂತ್ರಿ ಆವಾಸ ಯೋಜನಾ-ಗ್ರಾಮೀಣ (ಪಿಎಂಎವಾಯ್-ಜಿ), ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನಾ (ಪಿಎಂಜಿಎಸ್‌ವಾಯ್), ಶ್ಯಾಮ ಪ್ರಸಾದ್ ಮುಖರ್ಜಿ ರುರ್ಬನ್ ಮಿಷನ್ (ಎಸ್‌ಪಿಎಂಆರ್‌ಎಂ) ಮತ್ತು ರಾಷ್ಟ್ರೀಯ ಸಾಮಾಜಿಕ ನೆರವು ಕಾರ್ಯಕ್ರಮ (ಎನ್‌ಎಸ್‌ಎಪಿ)ಗಳ ಮೂಲಕ ಗ್ರಾಮೀಣಾಭಿವೃದ್ಧಿ ಸಚಿವಾಲಯವು ಯೋಜನೆಗಳನ್ನು ಜಾರಿಗೆ ತರುತ್ತಿದೆ ಎಂದು
ಸಚಿವರು ತಿಳಿಸಿದ್ದಾರೆ.


Spread the love

About Laxminews 24x7

Check Also

ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

Spread the love ಬೆನಕಟ್ಟಿ: ಗ್ರಾಮಕ್ಕೆ ಆಗಮಿಸಿದ ಮಾಜಿ ಕೇಂದ್ರ ಸಚಿವ ದಿ. ಸುರೇಶ ಅಂಗಡಿ ಪುತ್ರಿ ಶ್ರದ್ಧಾ ಶೆಟ್ಟರ್ ಬಿಜೆಪಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ