ಮುಂಬೈ: ಮಹಾರಾಷ್ಟ್ರದಲ್ಲಿ ಮಕ್ಕಳಿಗೆ ಪೋಲಿಯೋ ಹನಿ ಬದಲು ಸ್ಯಾನಿಟೈಸರ್ ಹಾಕಿದ್ದ ವಿಷಯ ಆತಂಕಕ್ಕೀಡು ಮಾಡಿತ್ತು. ಇದೀಗ ಬೃಹನ್ ಮುಂಬೈ ಮುನಿಸಿಪಲ್ ಕಾರ್ಪೋರೇಷನ್ ಅಧಿಕಾರಿಯೊಬ್ಬರು ನೀರಿನ ಬಾಟಲಿ ಅಂತ ತಿಳಿದು ಸ್ಯಾನಿಟೈಸರ್ ಕುಡಿದಿದ್ದಾರೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಶಿಕ್ಷಣ ಬಜೆಟ್ ಮಂಡಿಸುವಾಗ ಬೃಹನ್ಮುಂಬೈ ಮಹಾನಗರ ಪಾಲಿಕೆಯ ಹಿರಿಯ ಅಧಿಕಾರಿಯೊಬ್ಬರು ನೀರಿನ ಬದಲು ಸ್ಯಾನಿಟೈಸರ್ ಅನ್ನು ತಪ್ಪಾಗಿ ಸೇವಿಸಿದ್ದಾರೆ. ಕೂಡಲೇ ತಮ್ಮ ತಪ್ಪಿನ ಅರಿವಾಗಿ ಅಧಿಕಾರಿ ಸ್ಯಾನಿಟೈಸರ್ ಅನ್ನು ಉಗಿದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಹಾರಾಷ್ಟ್ರದ ಯವತ್ಮಾಲ್ ಜಿಲ್ಲೆಯ ಹಳ್ಳಿಯೊಂದರಲ್ಲಿ 12 ಮಕ್ಕಳಿಗೆ ಪೋಲಿಯೊ ಹನಿಗಳ ಬದಲಿಗೆ ಹ್ಯಾಂಡ್ ಸ್ಯಾನಿಟೈಸರ್ ಹನಿಗಳನ್ನು ನೀಡಿದ ಮೂರು ದಿನಗಳ ನಂತರ ಈ ಘಟನೆ ನಡೆದಿದೆ.
ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಶನ್‌ನ (ಬಿಎಂಸಿ) ಸಹಾಯಕ ಮುನ್ಸಿಪಲ್ ಕಮಿಷನರ್ ರಮೇಶ್ ಪವಾರ್ ಅವರು ಜನರಲ್ ಬಾಡಿ ಮೀಟಿಂಗ್ ಹಾಲ್‌ನಲ್ಲಿ ತಮ್ಮ ಮೇಜಿನ ಮೇಲೆ ಇಟ್ಟುಕೊಂಡಿದ್ದ ಬಾಟಲಿಯಿಂದ ಸ್ಯಾನಿಟೈಸರ್ ಕುಡಿದಿದ್ದರು.
#WATCH: BMC Joint Municipal Commissioner Ramesh Pawar accidentally drinks from a bottle of hand sanitiser, instead of a bottle of water, during the presentation of Budget in Mumbai. pic.twitter.com/MuUfpu8wGT
— ANI (@ANI) February 3, 2021
Laxmi News 24×7