Breaking News

ಗ್ಯಾಸ್ ಟ್ಯಾಂಕರ್ – ಕಂಟೈನರ್ ನಡುವೆ ಢಿಕ್ಕಿ ರಸ್ತೆ ಸಂಚಾರ ಅಸ್ತವ್ಯಸ್ತ

Spread the love

ಬಂಟ್ವಾಳ, ಫೆ.03. ಗ್ಯಾಸ್ ಟ್ಯಾಂಕರ್ ಹಾಗೂ ಕಂಟೈನರ್ ಲಾರಿ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಕೆಲಕಾಲ ರಸ್ತೆ ಸಂಚಾರದಲ್ಲಿ ಅಡಚಣೆಯುಂಟಾದ ಘಟನೆ ಮಂಗಳೂರು – ಬೆಂಗಳೂರು ರಾಷ್ಟೀಯ ಹೆದ್ದಾರಿಯ ಕಲ್ಲಡ್ಕದಲ್ಲಿ ಬುಧವಾರ ರಾತ್ರಿ ನಡೆದಿದೆ.

ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಗ್ಯಾಸ್ ಟ್ಯಾಂಕರ್ ಹಾಗೂ ವಿರುದ್ಧ ದಿಕ್ಕಿನಿಂದ ತೆರಳುತ್ತಿದ್ದ ಕಂಟೈನರ್ ಲಾರಿ ನಡುವೆ ಕಲ್ಲಡ್ಕ ಎಂಬಲ್ಲಿ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಎರಡೂ ಲಾರಿಗಳ ಚಾಲಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಭೇಟಿ ನೀಡಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಮಂಗಳವಾರವಷ್ಟೇ ಸೂರಿಕುಮೇರು ಎಂಬಲ್ಲಿ ಗ್ಯಾಸ್ ತುಂಬಿದ್ದ ಟ್ಯಾಂಕರ್ ಪಲ್ಟಿ ಹೊಡೆದು ರಸ್ತೆ ತಡೆ ಉಂಟಾಗಿತ್ತು.


Spread the love

About Laxminews 24x7

Check Also

ಘಟಿಕೋತ್ಸವದಲ್ಲಿ ವಂದೇ ಮಾತರಂ ಪೂರ್ಣ ಹಾಡು – ವಿಟಿಯು ಕುಲಪತಿ

Spread the loveಬೆಳಗಾವಿ: ರಾಷ್ಟ್ರೀಯ ಗೀತೆಯಾಗಿರುವ ವಂದೇ ಮಾತರಂ ಹಾಡುವ ವಿಚಾರವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡುವೆ ಈಗಾಗಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ