Breaking News

ಉಪ ರಿಜಿಸ್ಟ್ರಾರ್ ಗೆ 70 ಲಕ್ಷ ರೂಪಾಯಿ ವಂಚನೆ ಮಾಡಿ ಪರಾರಿ

Spread the love

ಬೆಂಗಳೂರು: ವಿಧಾನಸೌಧದಲ್ಲಿ ಕೆಲಸ ಮಾಡುತ್ತಿರುವುದಾಗಿ ಹೇಳಿಕೊಂಡ ದಂಪತಿ, ಸಚಿವರ ಬಳಿ ಹೇಳಿ ಕೆಲಸ ಕೊಡಿಸುವುದಾಗಿ ನಂಬಿಸಿ ರಾಜೀವ್ ಗಾಂಧಿ ಆರೋಗ್ಯ ವಿವಿ ಉಪ ರಿಜಿಸ್ಟ್ರಾರ್ ಗೆ 70 ಲಕ್ಷ ರೂಪಾಯಿ ವಂಚನೆ ಮಾಡಿ ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ.

ಮಂಜುನಾಥ್ ಹಾಗೂ ಲಕ್ಷ್ಮಿಪ್ರಿಯಾ ದಂಪತಿ ವಂಚನೆ ಮಾಡಿರುವ ಆರೋಪಿಗಳು. ವಂಚನೆಗೊಳಗಾದ ಡಾ.ಪ್ರಭಾ ಹೆಬ್ಬಾಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಮಂಜುನಾಥ್ ಹಾಗೂ ಲಕ್ಷ್ಮಿಪ್ರಿಯಾ ತಾವು ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷರು ಎಂದು ಹೇಳಿಕೊಂಡು ಪರಿಚಯ ಮಾಡಿಕೊಂಡಿದ್ದಾರೆ. ಸಚಿವರ ಬಳಿ ಹೇಳಿ ಕೆಲಸ ಕೊಡಿಸುವುದಾಗಿ ಹೇಳಿ ಹಂತ ಹಂತವಾಗಿ ಡಾ.ಪ್ರಭಾ ಅವರಿಂದ ಹಣ ಪಡೆದಿದ್ದಿದ್ದಾರೆ ಎನ್ನಲಾಗಿದೆ. ಸದ್ಯ ಪರಾರಿಯಾಗಿರುವ ಆರೋಪಿಗಳಿಗಾಗಿ ಶೋಧಕಾರ್ಯ ನಡೆದಿದೆ.


Spread the love

About Laxminews 24x7

Check Also

ಕೆಪಿಎಸ್‌ಸಿ ನೇಮಕಾತಿ ಅಕ್ರಮ- ಎಸ್‌ಐಟಿ ರಚನೆಗೆ ಸುಪ್ರೀಂ ತಡೆ

Spread the loveನವದೆಹಲಿ: ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಕೆಪಿಎಸ್‌ಸಿ  ನೇಮಕಾತಿ ಹಗರಣದ ತನಿಖೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ