Breaking News

ವಕಿಲರನ್ನು ಅವಾಚ್ಯ ಶಬ್ಧಗಳೀಂದ ನಿಂದಿಸಿದ್ದ ಸಿಪಿಐ ವಕೀಲರ ಸಂಘದ ಮುಖಂಡರು ಪ್ರತಿಭಟನೆ

Spread the love

ಬೆಳಗಾವಿ: ಬೆಳಗಾವಿ ಮಾಳಮಾರುತಿ ಪೊಲೀಸ್ ಠಾಣೆಗೆ ದೂರು ದಾಖಲಿಸಲು ಹೋಗಿದ್ದ ವಕೀಲರನ್ನು ಸಿಪಿಐ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದನ್ನು ಖಂಡಿಸಿ ಬೆಳಗಾವಿ ವಕೀಲರ ಸಂಘದ ಮುಖಂಡರು ಪ್ರತಿಭಟನೆ ನಡೆಸಿದರು.

ಕೋರ್ಟ್ ಬಳಿ ಬ್ಯಾರಿಕೇಡ್ ಗಳನ್ನು ಹಾಕಿ, ರಸ್ತೆ ತಡೆ ನಡೆಸಿ ಸಿಪಿಐ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸಿಪಿಐ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಕಕ್ಷಿದಾರರೊಬ್ಬರ ಪರ ದೂರು ದಾಖಲಿಸಲೆಂದು ಠಾಣೆಗೆ ಹೋಗಿದ್ದ ವಕೀಲ ಚೇತನ ಈರಣ್ಣ ಗೆ ಸಿಪಿಐ ಸುನೀಲ ಪಾಟೀಲ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲರ ಸಂಘ ಇಂದು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದು, ವಕೀಲರಿಗೆ ಗೌರವ ನೀಡದ ಸಿಪಿಐ ನ್ನು ಜಿಲ್ಲೆಯಿಂದ ವರ್ಗಾವಣೆ ಮಾಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ


Spread the love

About Laxminews 24x7

Check Also

ಕೆಪಿಎಸ್‌ಸಿ ನೇಮಕಾತಿ ಅಕ್ರಮ- ಎಸ್‌ಐಟಿ ರಚನೆಗೆ ಸುಪ್ರೀಂ ತಡೆ

Spread the loveನವದೆಹಲಿ: ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಕೆಪಿಎಸ್‌ಸಿ  ನೇಮಕಾತಿ ಹಗರಣದ ತನಿಖೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ