ಬೆಂಗಳೂರು, ಫೆ.5- ಬಾಲ್ಯ ವಿವಾಹ, ಬಲವಂತದ ಮದುವೆಗಳನ್ನು ತಪ್ಪಿಸಲು ಪ್ರತಿಯೊಂದು ಮದುವೆಯನ್ನು ಕಡ್ಡಾಯವಾಗಿ ನೋಂದಣಿ ಮಾಡುವ ಬೇಡಿಕೆಯ ಬಗ್ಗೆ ಪರಿಶೀಲಿಸುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಭರವಸೆ ನೀಡಿದರು. ವಿಧಾನಪರಿಷತ್‍ನ ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್‍ನ ಶಾಸಕ ಕೆ.ಎ.ತಿಪ್ಪೇಸ್ವಾಮಿ ಅವರು, ಹಿಂದು, ಮುಸ್ಲಿಂ, ಕ್ರಿಶ್ಚಿಯನ್ ಸೇರಿದಂತೆ ಎಲ್ಲಾ ಧರ್ಮಗಳಲ್ಲಿರುವ ವಿವಾಹ ಕಾಯ್ದೆಯನ್ನು ತಿದ್ದುಪಡಿ ಮಾಡಿ ಪ್ರತಿಯೊಂದು ಮದುವೆಯನ್ನು ನೋಂದಣಿ ಮಾಡಿಸಬೇಕು. ಆಗ ಬಾಲ್ಯವಿವಾಹ ಮತ್ತು ಬಲವಂತದ ಮದುವೆಗಳು ನಿಲ್ಲುತ್ತವೆ ಎಂದು ಸಲಹೆ ನೀಡಿದರು.
Laxmi News 24×7