Breaking News

ಉಪಚುನಾವಣೆಯಲ್ಲೂ ಗೆಲುವು ನಮ್ಮದೇ : ಮತ್ತೊಮ್ಮೆ ಚಾಲೆಂಜ್ ಹಾಕಿದ ಸಿಎಂ

Spread the love

ಬೆಂಗಳೂರು,ಫೆ.5- ಬೆಂಗೂರು,ಫೆ.5- ಮುಂಬರುವ ಎರಡು ವಿಧಾನಸಭಾ ಕ್ಷೇತ್ರ ಹಾಗೂ ಒಂದು ಲೋಕಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲೂ ಬಿಜೆಪಿ ಗೆಲ್ಲಲಿದೆ. ಇದನ್ನು ಇದಂದೇ ಬರೆದಿಟ್ಟುಕೊಳ್ಳಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸವಾಲು ಹಾಕಿದರು. ಮಸ್ಕಿ, ಬಸವಕಲ್ಯಾಣ ವಿಧಾನಸಭೆ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನಮ್ಮ ಪಕ್ಷ ಗೆದ್ದೇ ಗೆಲ್ಲುತ್ತದೆ. ಯಾವುದೇ ಕಾರಣಕ್ಕೂ ಕಾಂಗ್ರೆಸಿಗರು ಗೆಲ್ಲುವುದಿಲ್ಲ. ಇದನ್ನು ಈ ಸದನದಲ್ಲಿ ನಾನು ಹೇಳುತ್ತೇನೆ ಎಂದರು.

ಜನರ ವಿಶ್ವಾಸ ಕಳೆದುಕೊಂಡಿರುವ ಕಾಂಗ್ರೆಸ್ ಮುಂದೆ ಯಾವ ಚುನಾವಣೆಯನ್ನು ಗೆಲ್ಲುವುದಿಲ್ಲ. ಲೋಕಸಭೆ ಹಾಗೂ ಉಪಚುನಾವಣೆಯಲ್ಲಿ ಇದು ಸಾಬೀತಾಗಿದೆ. ನೀವು ಶಾಶ್ವತವಾಗಿ ವಿರೋಧ ಪಕ್ಷದ ಸ್ಥಾನದಲ್ಲಿಯೇ ಕೂರುತ್ತೀರಿ. ನಿಮ್ಮ ಪಕ್ಷವನ್ನು ರಾಜ್ಯದ ಜನತೆ ಯಾವುದೇ ಕಾರಣಕ್ಕೂ ಬೆಂಬಲಿಸುವುದಿಲ್ಲ ಎಂದು ತಿಳಿಸಿದರು.ಸಿದ್ದರಾಮಯ್ಯನವರೇ ನೀವು ವಿರೋಧ ಪಕ್ಷದ ನಾಯಕರಾಗಿ ಟೀಕೆ ಮಾಡಿದರೆ ನಾವು ಅದನ್ನು ಸ್ವಾಗತಿಸುತ್ತೇವೆ. ಆದರೆ ವಿರೋಧಕ್ಕಾಗಿ ವಿರೋಧಿಸಿದರೆ ಒಪ್ಪುವುದಿಲ್ಲ. ಮೊದಲು ಬೆಂಕಿ ಉಗುಳುವುದನ್ನು ನಿಲ್ಲಿಸಿ. ಪ್ರತಿಪಕ್ಷದ ನಾಯಕರಾಗಿ ಸರ್ಕಾರಕ್ಕೆ ಸೂಕ್ತ ಸಲಹೆ ಮಾರ್ಗದರ್ಶನ ಕೊಟ್ಟರೆ ನಮ್ಮದೇನು ಅಭ್ಯಂತರವಿಲ್ಲ. ಆದರೆ ವಿರೋಧಕ್ಕಾಗಿ ವಿರೋಧಿಸಿದರೆ ನಾವೇನು ಮಾಡಲು ಸಾಧ್ಯ ಎಂದು ಪ್ರಶ್ನಿಸಿದರು.


Spread the love

About Laxminews 24x7

Check Also

ಯಾವುದೇ ದೂರದೃಷ್ಟಿ ಇಲ್ಲದ ನೀರಸ ಆಯವ್ಯಯ ಪತ್ರ ಇದು- ಬಿವೈವಿ

Spread the love ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಬಜೆಟ್ ಮೂಲಕ ರಾಜ್ಯದ ಜನತೆಗೆ ನಿರಾಶೆ ಉಂಟು ಮಾಡಿದ್ದಾರೆ. ಯಾವುದೇ ದೂರದೃಷ್ಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ