Breaking News
Home / ರಾಜ್ಯ / ಸಭಾಪತಿ ಸ್ಥಾನಕ್ಕೆ ಪ್ರತಾಪ್ ಚಂದ್ರ ಶೆಟ್ಟಿ ರಾಜೀನಾಮೆ: ಫೆಬ್ರವರಿ 10ರವರೆಗೆ ವಿಧಾನಪರಿಷತ್ ಕಲಾಪ ವಿಸ್ತರಣೆ

ಸಭಾಪತಿ ಸ್ಥಾನಕ್ಕೆ ಪ್ರತಾಪ್ ಚಂದ್ರ ಶೆಟ್ಟಿ ರಾಜೀನಾಮೆ: ಫೆಬ್ರವರಿ 10ರವರೆಗೆ ವಿಧಾನಪರಿಷತ್ ಕಲಾಪ ವಿಸ್ತರಣೆ

Spread the love

ಬೆಂಗಳೂರು: ಸಭಾಪತಿ ಸ್ಥಾನಕ್ಕೆ ಪ್ರತಾಪ್ ಚಂದ್ರ ಶೆಟ್ಟಿಯವರು ರಾಜೀನಾಮೆ ನೀಡಿದ ಬೆನ್ನಲ್ಲೇ ನೂತನ ಸಭಾಪತಿ ಆಯ್ಕೆ ಮಾಡುವ ಅಗತ್ಯವಿದ್ದು, ಈ ಹಿನ್ನೆಲೆಯಲ್ಲಿ ವಿಧಾನಪರಿಷತ್ ಕಲಾಪವನ್ನು ಫೆ.10ರವರೆಗೆ ವಿಸ್ತರಿಸಲು ಸರ್ಕಾರ ನಿರ್ಧರಿಸಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮೂರು ದಿನಗಳ ಕಾಲ ಪರಿಷತ್ ಕಲಾಪವನ್ನು ವಿಸ್ತರಣೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ, ಈ ನಿರ್ಧಾರವನ್ನು ರಾಜ್ಯಪಾಲರಿಗೆ ರವಾನೆ ಮಾಡಿರುವ ಸರ್ಕಾರ, ಅನುಮತಿ ನೀಡುವಂತೆ ಮನವಿ ಮಾಡಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.

ಕಳೆದ ಅಧಿವೇಶನದ ಸಂದರ್ಭದಲ್ಲಿ ಸಭಾಪತಿ ವಿರುದ್ಧ ಬಿಜೆಪಿ, ಜೆಡಿಎಸ್ ಅವಿಶ್ವಾಸ ನಿರ್ಣಯ ಮಂಡಿಸಿದ್ದವು. ಸಭಾಪತಿಯವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದವು. ಸಭಾಪತಿ ಸ್ಥಾನದಲ್ಲಿ ಉಪಸಭಾಪತಿಯನ್ನು ಕೂರಿಸಿ ಸಭಾಪತಿಯವರನ್ನು ಸದನಕ್ಕೆ ಬರದಂತೆ ತಡೆದ ಸಂದರ್ಭದಲ್ಲಿ ಪರಿಷತ್‍ನಲ್ಲಿ ಸಾಕಷ್ಟು ಕಹಿ ಘಟನೆಗಳು ನಡೆದಿದ್ದವು.

ಉಪಸಭಾಪತಿಯಾಗಿದ್ದ ಧರ್ಮೆಗೌಡರು ಸಾವನ್ನಪ್ಪಿದ ಪರಿಣಾಮ ತೆರವಾಗಿದ್ದ ಉಪಸಭಾಪತಿ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿಯ ಎಂ.ಕೆ.ಪ್ರಾಣೇಶ್ ಆಯ್ಕೆಯಾಗಿದ್ದರು. ಮತ್ತೆ ಸಭಾಪತಿ ವಿರುದ್ಧ ಬಿಜೆಪಿ, ಜೆಡಿಎಸ್ ಅವಿಶ್ವಾಸ ನಿರ್ಣಯ ಮಂಡಿಸಿದ್ದರು. ಇದರಂತೆ ವಿದಾಯದ ಭಾಷಣ ಮಾಡಿ ಪ್ರತಾಪ್ ಚಂದ್ರಶೆಟ್ಟಿಯವರು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಈ ನಡುವೆ ಜೆಡಿಎಸ್‍ನೊಂದಿಗೆ ದೋಸ್ತಿ ಮಾಡಿಕೊಳ್ಳುವ ಮೂಲಕ ಬಿಜೆಪಿ ಮೇಲ್ಮನೆಯಲ್ಲಿ ಅಧಿಕಾರ ಹಿಡಿಯಲು ಸಜ್ಜಾಗಿದ್ದು, ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿಯವರನ್ನು ಅಭ್ಯರ್ಥಿ ಮಾಡಲು ನಿರ್ಧಾರ ಕೈಗೊಂಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.


Spread the love

About Laxminews 24x7

Check Also

ಕೇಂದ್ರ ಸರ್ಕಾರ ರಾಜ್ಯಕ್ಕೆ 2.30 ಲಕ್ಷ ಸಾವಿರ ಕೋಟಿ ರೂ. ನೀಡಿದೆ;ಜೋಶಿ

Spread the loveಕರ್ನಾಟಕದಲ್ಲಿ ಬರಗಾಲ ಆವರಿಸಿದ್ದು, ಪರಿಹಾರ ನೀಡುವಂತೆ ಮನವಿ ಸಲ್ಲಿಸಿದರೂ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರೂ ಇನ್ನೂ ಕೂಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ