Breaking News

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ: B,S,Y,- ಯತ್ನಾಳ ಜಟಾಪಟಿ

Spread the love

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ ‘ಪ್ರವರ್ಗ 2 ಎ’ ಮೀಸಲಾತಿ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಬಿಜೆಪಿ ಸದಸ್ಯ ಬಸನಗೌಡ ಯತ್ನಾಳ ನಡುವಿನ ಜಟಾಪಟಿಗೆ ವಿಧಾನಸಭೆ ಶುಕ್ರವಾರ ಸಾಕ್ಷಿಯಾಯಿತು.

ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಪ್ರಸ್ತಾವಕ್ಕೆ ಮುಖ್ಯಮಂತ್ರಿ ಉತ್ತರ ನೀಡಿ ಕೂತರು. ಈ ವೇಳೆ ಬಸನಗೌಡ ಯತ್ನಾಳ, ‘ಪಂಚಮಸಾಲಿ ಹಾಗೂ ಹಾಲುಮತ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಮೂರು ಪಕ್ಷಗಳ ಸದಸ್ಯರು ಸದನದಲ್ಲಿ ಧರಣಿ ನಡೆಸಿದ್ದೇವೆ. ಆದರೆ, ಆ ವಿಷಯದ ಬಗ್ಗೆ ಮುಖ್ಯಮಂತ್ರಿ ಉತ್ತರ ನೀಡಿಲ್ಲ’ ಎಂದು ದೂರಿದರು. ‘ಈಗ ವಿರೋಧ ಪಕ್ಷದ ನಾಯಕರು ಸರ್ಕಾರದ ಉತ್ತರದ ಬಗ್ಗೆ ಸ್ಪಷ್ಟೀಕರಣ ಕೇಳುತ್ತಿದ್ದಾರೆ. ನಿಮಗೆ ಮತ್ತೆ ಅವಕಾಶ ನೀಡುತ್ತೇನೆ’ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಭರವಸೆ ನೀಡಿದದರು.

‘ಮತ್ತೆ ನೀವು ಕಲಾಪ ಮುಂದೂಡಿ ಹೋಗುತ್ತೀರಿ. ಉತ್ತರವೇ ಸಿಗುವುದಿಲ್ಲ. ಮುಖ್ಯಮಂತ್ರಿ ಅವರು ಈಗಲೇ ಹೇಳಿಕೆ ನೀಡಬೇಕು’ ಎಂದು ಯತ್ನಾಳ ಆಗ್ರಹಿಸಿದರು.

ಆಗ ಎದ್ದುನಿಂತ ಯಡಿಯೂರಪ್ಪ, ‘ನಮ್ಮದ್ದು ಪ್ರಾದೇಶಿಕ ಪಕ್ಷವಲ್ಲ, ರಾಷ್ಟ್ರೀಯ ಪಕ್ಷ. ಇಂತಹ ವಿಚಾರವನ್ನು ನಾನು ಏಕಾಏಕಿ ತೀರ್ಮಾನ ಮಾಡಲು ಆಗುವುದಿಲ್ಲ. ಪ್ರಧಾನಿ, ಗೃಹ ಸಚಿವರು ಹಾಗೂ ಕೇಂದ್ರದ ಪ್ರಮುಖರ ಜತೆಗೆ ಚರ್ಚಿಸಿ ಮುಂದುವರಿಯಬೇಕಿದೆ’ ಎಂದರು. ಈ ಬಗ್ಗೆ ನಿಲುವು ಸ್ಪಷ್ಟಪಡಿಸಬೇಕು ಎಂದು ಯತ್ನಾಳ ಆಗ್ರಹಿಸಿದರು.

About Laxminews 24x7

Check Also

ಹಂಪಿಯಲ್ಲಿ ಗುಡ್ಡ ಹತ್ತುವಾಗ ಜಾರಿಬಿದ್ದು ಗಾಯಗೊಂಡ ಫ್ರಾನ್ಸ್ ಪ್ರವಾಸಿ; 2 ದಿನಗಳ ಬಳಿಕ ರಕ್ಷಣೆ

Spread the loveವಿಜಯನಗರ: ವಿಶ್ವವಿಖ್ಯಾತ ಹಂಪಿ ಪ್ರವಾಸಕ್ಕೆ ಆಗಮಿಸಿದ್ದ ವಿದೇಶಿ ಪ್ರವಾಸಿಗನೊಬ್ಬ ಗುಡ್ಡ ಏರಲು ತೆರಳಿ ಕಾಲು ಜಾರಿ ಬಿದ್ದು, ಗಾಯಗೊಂಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ