Breaking News

ರಾಷ್ಟ್ರವ್ಯಾಪಿ ‘ಚಕ್ಕಾ ಜಾಮ್‍’,ರಾಜ್ಯದಲ್ಲಿ ಯಾವೆಲ್ಲ ರಸ್ತೆಗಳು ಬಂದ್?:

Spread the love

ವದೆಹಲಕ, ಫೆ.6 (ಪಿಟಿಐ)- ಕೇಂದ್ರದ ಹೊಸ ಕೃಷಿ ಕಾಯಿದೆ ವಿರೋಸಿ ರೈತರು ಶನಿವಾರ ನಡೆಸುತ್ತಿರುವ ರಾಷ್ಟ್ರವ್ಯಾಪಿ ಚಕ್ಕಾ ಜಾಮ್‍ನಿಂದ ಹೊರಬರುವ ಯಾವುದೇ ಪರಿಸ್ಥ್ಥಿತಿಯನ್ನು ಎದುರಿಸಲು ಅರೆಸೈನಿಕ ಪಡೆಗಳೂ ಸೇರಿದಂತೆ ಸಾವಿರಾರು ಸಿಬ್ಬಂದಿಯನ್ನು ನಿಯೋಜಿಸಿರುವ ದೆಹಲಿ ಪೊಲೀಸರು ಎಲ್ಲಾ ಗಡಿ ಕೇಂದ್ರಗಳಲ್ಲಿ ಭದ್ರತೆಯನ್ನು ತೀವ್ರಗೊಳಿಸಿದ್ದಾರೆ.

ಆದಾಗ್ಯೂ, ಸಂಯುಕ್ತ ಕಿಸಾನ್ ಮೋರ್ಚಾ ಚಕ್ಕಾ ಜಾಮ್ ಸಂದರ್ಭದಲ್ಲಿ ದೆಹಲಿ, ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿನ ರಸ್ತೆಗಳನ್ನು ನಿರ್ಬಂಸುವುದಿಲ್ಲ ಎಂದಿದೆ. ಆದರೆ, ದೇಶದ ಇತರ ಭಾಗಗಳು ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳನ್ನು ಮೂರು ಗಂಟೆಗಳ ಕಾಲ ನಿರ್ಬಂಸಲಾಗುತ್ತದೆ. ರೈತರು ಎಲ್ಲೆಡೆ ಶಾಂತಿಯುತವಾಗಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ರೈತರು ಪ್ರತಿಪಾದಿಸಿದ್ದಾರೆ.

ರಾಜ್ಯದಲ್ಲಿ ಯಾವೆಲ್ಲ ರಸ್ತೆಗಳು ಬಂದ್?:

ಶಿವಮೊಗ್ಗ-ಚಿತ್ರದುರ್ಗ ರಾಜ್ಯ ಹೆದ್ದಾರಿ, ವಿಜಯಪುರ-ಕಲಬುರ್ಗಿ ರಾಷ್ಟ್ರೀಯ ಹೆದ್ದಾರಿ, ಬೆಂಗಳೂರು-ದೊಡ್ಡಬಳ್ಳಾಪುರ ರಾಜ್ಯ ಹೆದ್ದಾರಿ ಬಂದ್ ಆಗಲಿದೆ.

ಬೆಂಗಳೂರು-ಮೈಸೂರು, ಬಿಡದಿ-ಮಂಡ್ಯ ರಾಜ್ಯ ಹೆದ್ದಾರಿ
ರಾಯಚೂರು ಅಸ್ಕಿಹಾಲ್ ಬಳಿ ರಾಷ್ಟ್ರೀಯ ಹೆದ್ದಾರಿ ತಡೆ
ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿ
ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ
ಬೆಂಗಳೂರು-ಗೋವಾ ರಾಷ್ಟ್ರೀಯ ಹೆದ್ದಾರಿ
ಪುಣಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ
ಬೆಂಗಳೂರು -ಮಾಗಡಿ ರಸ್ತೆ ರಾಜ್ಯ ಹೆದ್ದಾರಿ
ಬೆಂಗಳೂರು-ಚಾಮರಾಜನಗರ ಹೆದ್ದಾರಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಹೆದ್ದಾರಿ ಬಂದ್ ನಡೆಸಲಾಗುತ್ತಿದೆ.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ