Breaking News

ಪತಿಯ ಅತಿಯಾದ ಚಟ, ಕಿರುಕುಳಕ್ಕೆ ಬೇಸತ್ತು ಐಪಿಎಸ್​ ಅಧಿಕಾರಿಯಿಂದ ದೂರು ದಾಖಲು!

Spread the love

ಬೆಂಗಳೂರು: ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಮಹಿಳಾ ಐಪಿಎಸ್​ ಅಧಿಕಾರಿಯೊಬ್ಬರು ತಮ್ಮ ಪತಿಯ ವಿರುದ್ಧ ನಗರದ ಕಬ್ಬನ್​ ಪಾರ್ಕ್​ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಪತಿ ನಿತೀನ್ ಸುಬಾಶ್ ಮತ್ತು ಕುಟುಂಬಸ್ಥರ ವಿರುದ್ಧ ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ದೂರು ನೀಡಿದ್ದಾರೆ. ನಿತೀನ್ ಸುಬಾಶ್ ಸೇರಿದಂತೆ ಒಟ್ಟು 7 ಮಂದಿಯ ವಿರುದ್ಧ ಎಫ್​ಐಆರ್ ದಾಖಲಾಗಿದೆ.

2009ರ ಬ್ಯಾಚ್​​ನ ಅಧಿಕಾರಿ ಅಗಿರುವ ವರ್ತಿಕಾ 2011 ರಲ್ಲಿ ವಿವಾಹ ಅಗಿದ್ದರು. ಐಎಫ್​ಎಸ್​ (ಭಾರತೀಯ ವಿದೇಶಾಂಗ ಸೇವೆ) ಅಧಿಕಾರಿಯಾಗಿರುವ ನಿತೀನ್​, ಕೆಲ ರಾಯಬಾರಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರು. ಪತಿಗೆ ಕುಡಿಯುವ‌ ಮತ್ತು ಧೂಮಪಾನ ಮಾಡುವ ಅತಿಯಾದ ಚಟವಿದೆ. ಇದನ್ನು ಬಿಡುವಂತೆ ಹಲವು ಬಾರಿ ಹೇಳಿದಾಗಲು ಜಗಳ ಮಾಡಿ ಹಲ್ಲೆ ಮಾಡಿದ್ದಾರೆ. 2016ರಲ್ಲಿ ಇದೇ ವಿಚಾರಕ್ಕೆ ಹಲ್ಲೆ ಮಾಡಿದಾಗ ಕೈ ಮುರಿದು ಹೋಗಿತ್ತು ಎಂದು ವರ್ತಿಕಾ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ದೀಪಾವಳಿಗೆ ಉಡುಗೊರೆ ನೀಡಲಿಲ್ಲ ಎಂದು ವಿಚ್ಛೇದನದ ಬೆದರಿಕೆ ಹಾಕಿದ್ದರು. ಮದುವೆಯ ಸಂದರ್ಭದಲ್ಲಿ ಚಿನ್ನಾಭರಣ ಪಡೆದುಕೊಂಡಿದ್ದಾರೆ. ಅಲ್ಲದೆ ಹಣಕ್ಕಾಗಿ ಪದೇ ಪದೇ ಪಿಡಿಸುತ್ತಿದ್ದಾರೆ. ನನ್ನ ಅಜ್ಜಿಯ ಬಳಿ ಐದು ಲಕ್ಷದ ಚೆಕ್ ಪಡೆದಿದ್ದ ನಿತೀನ್, ಮನೆ ಮಾಡುವಾಗ 35 ಲಕ್ಷ ಹಣ ಪಡೆದಿದ್ದರು. ಇದೀಗ ಇನ್ನು ಹೆಚ್ಚಿನ ಹಣಕ್ಕಾಗಿ ಪೀಡಿಸುತ್ತಿದ್ದಾರೆಂದು ವರ್ತಿಕಾ ಆರೋಪಿಸಿದ್ದಾರೆ.


Spread the love

About Laxminews 24x7

Check Also

BBK12 ಮುಕ್ತಾಯ ಬೆನ್ನಲ್ಲೇ ಕಿಚ್ಚ ಸುದೀಪ್, ಮ್ಯಾನೇಜರ್ ಚಂದ್ರಚೂಡ್ ವಿರುದ್ಧ ವಂಚನೆ ಆರೋಪ: ಕಮಿಷನರ್‌ಗೆ ದೂರು.

Spread the love BBK12 ಮುಕ್ತಾಯ ಬೆನ್ನಲ್ಲೇ ಕಿಚ್ಚ ಸುದೀಪ್, ಮ್ಯಾನೇಜರ್ ಚಂದ್ರಚೂಡ್ ವಿರುದ್ಧ ವಂಚನೆ ಆರೋಪ: ಕಮಿಷನರ್‌ಗೆ ದೂರು. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ