Breaking News

ಅನರ್ಹ ‘ಬಿಪಿಎಲ್ ಪಡಿತರ ಚೀಟಿದಾರ’ರೇ ಗಮನಿಸಿ : ಮಾ.31ರೊಳಗೆ ‘ನಿಮ್ಮ ಕಾರ್ಡ್ ರದ್ದು’

Spread the love

ಬೆಳಗಾವಿ : ರಾಜ್ಯದಲ್ಲಿ ಅರ್ಹ ಬಿಪಿಎಲ್ ಕಾರ್ಡ್ ದಾರರು ಯಾರು, ಅನರ್ಹ ಬಿಪಿಎಲ್ ಕಾರ್ಡ್ ದಾರರು ಯಾರು ಎನ್ನುವ ಬಗ್ಗೆ ಸರ್ವೆ ಕಾರ್ಯ ನಡೆಸಲಾಗುತ್ತದೆ. ಈ ಮೂಲಕ ಅನಧಿಕೃತ ಬಿಪಿಎಲ್ ಕಾರ್ಡ್ ಗಳನ್ನು ಪತ್ತೆ ಹಚ್ಚಲಾಗುತ್ತದೆ. ಇಂತಹ ಕಾರ್ಡ್ ಗಳನ್ನು ಮಾರ್ಚ್ 31ರೊಳಗೆ ರದ್ದು ಪಡಿಸಲಾಗುತ್ತದೆ ಎಂಬುದಾಗಿ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಉಮೇಶ್ ಕತ್ತಿ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯದಲ್ಲಿ ಅನರ್ಹ ಬಿಪಿಎಲ್ ಪಡಿತರ ಚೀಟಿದಾರರಿದ್ದಾರೆ. ಅನಧಿಕೃತ ಪಡಿತರ ಚೀಟಿ ರದ್ದು ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ತಹಶೀಲ್ದಾರ್, ಪಿಡಿಒ, ಗ್ರಾಪಂ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸಿ ಪ್ರತಿಗ್ರಾಮಗಳಲ್ಲಿ ಸರ್ವೆ ಮಾಡಿಸಲಾಗುವುದು. ಅನಧಿಕೃತ ಕಾರ್ಡ್ ಪತ್ತೆ ಹಚ್ಚಲಾಗುವುದು. ಮಾರ್ಚ್ 31ರೊಳಗೆ ಅನಧಿಕೃತ ಪಡಿತರ ಚೀಟಿದಾರರ ಮಾಹಿತಿ ನೀಡುವಂತೆ ಸೂಚಿಸಲಾಗಿದೆ. ಬಳಿಕವೇ ಅನಧಿಕೃತ ಕಾರ್ಡ್‍ಗಳನ್ನು ರದ್ದುಪಡಿಸಲಾಗುವುದು ಎಂದರು.

ಬಿಪಿಎಲ್ ಕಾರ್ಡ್ ಪಡೆಯಲು ಅದರದೇ ಆದ ಮಾನದಂಡಗಳಿವೆ. ಮಾನದಂಡ ಉಲ್ಲಂಘಿಸಿ ಕಾರ್ಡ್ ಪಡೆದಿದ್ದರೆ ಅಂಥ ಕಾರ್ಡ್‍ಗಳನ್ನು ರದ್ದು ಮಾಡಲಾಗುವುದು. ಅರ್ಹ ಫಲಾನುಭವಿಗಳಿಗೆ ಮಾತ್ರವೇ ಬಿಪಿಎಲ್ ಕಾರ್ಡ್ ಸಿಗಬೇಕು ಎಂಬುದು ನಮ್ಮ ಉದ್ದೇಶ ಎಂದು ಹೇಳಿದರು.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ